ವಿಜಯ್ ಅವರ ತಂದೆ ಎಸ್.ಎ. ಚಂದ್ರಶೇಖರ್ ಮತ್ತು ತಾಯಿ ಶೋಭಾ ಚಂದ್ರಶೇಖರ್ ಸಮಾರಂಭದಲ್ಲಿ ಭಾಗಿಯಾಗಿ ಮಗನನ್ನು ಹರಸಿದರು. ಆದರೆ, ಪತ್ನಿ ಸಂಗೀತಾ ಸೊರ್ನಲಿಂಗಂ ಮತ್ತು ಮಕ್ಕಳಾದ ಜೇಸನ್ ಸಂಜಯ್ ಹಾಗೂ ದಿವ್ಯಾ ಸಾಶಾ ಸಮಾರಂಭದಲ್ಲಿ ಕಾಣಿಸಿಕೊಳ್ಳದಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಇದೇ ವೇಳೆ, ವಿಜಯ್ ಅವರೊಂದಿಗೆ ಡೇಟಿಂಗ್ ವದಂತಿಯಲ್ಲಿರುವ ನಟಿ ತ್ರಿಶಾ ಕೃಷ್ಣನ್ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದು ಚರ್ಚೆಗೆ ಮತ್ತಷ್ಟು ತುಪ್ಪ ಸುರಿದಿದೆ.