ನಿಮ್ಮ ಸೇವೆಗಾಗಿ ಧನ್ಯವಾದ: ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್​ ರಾಜೀನಾಮೆ; ಸರ್ಕಾರದ ಮೊದಲ ರಿಯಾಕ್ಷನ್​! Dharmendra Pradhan Resignation

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
Published on

ಪ್ರಮುಖ ಮುಖ್ಯಾಂಶಗಳು

  • ನೀಟ್ ಯುಜಿ ಪರೀಕ್ಷಾ ಅಕ್ರಮದ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ
  • ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
  • ರಾಜೀನಾಮೆ ಸ್ವೀಕರಿಸಿದ ಕೇಂದ್ರ ಸರ್ಕಾರ
ನವದೆಹಲಿ: ನೀಟ್​ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ವಿರೋಧಿಸಿ ಕಾಕ್ರೋಚ್​ ಜನತಾ ಪಾರ್ಟಿ ಕಳೆದೊಂದು ತಿಂಗಳಿನಿಂದ ದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿತ್ತು. ಈ ಪ್ರತಿಭಟನೆಯ ಪ್ರಮುಖ ಗುರಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ಅವರ ರಾಜೀನಾಮೆಯನ್ನು ಪಡೆಯುವುದಾಗಿತ್ತು. ಇಂದು (ಶನಿವಾರ, ಜು.25) ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ತಮ್ಮ ಸಚಿಚ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು (Dharmendra Pradhan Resignation) ಈ ರಾಜೀನಾಮೆಯನ್ನು ಸರ್ಕಾರ ಸ್ವೀಕರಿಸಿದೆ.

ಸರ್ಕಾರ ಹೇಳಿದ್ದೇನು?

ಕೇಂದ್ರ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್​ ರಾಜೀನಾಮೆ ನೀಡುತ್ತಿದ್ದಂತೆ ಇದಕ್ಕೆ ಪ್ರತಿಕ್ರಿಯೆ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಕಿರಣ್​ ರಿಜುಜು, ನಾಯಕನ ನಿಜವಾದ ನಾಯಕತ್ವವನ್ನು ದಶಕಗಳ ಬಳಿಕ ಅಳೆಯಲಾಗುತ್ತದೆ ಮತ್ತು ಧರ್ಮೇಂದ್ರ ಪ್ರಧಾನ್​ ಅವರ ಪ್ರಯಾಣವು ಸಾರ್ವಜನಿಕ ಜೀವನ ಮತ್ತು ವಿದ್ಯಾರ್ಥಿ ಕಲ್ಯಾಣದೊಂದಿಗೆ ಅವರ ಆಜೀವ ತೊಡಗಿಸಿಕೊಂಡಿದ್ದಕ್ಕೆ ಸಾಕ್ಷಿಯಾಗಿದೆ ಎಂದು ರಿಜಿಜು ಬರೆದಿದ್ದಾರೆ.
ಶಿಕ್ಷಣ ಕ್ಷೇತ್ರವನ್ನು ಮುನ್ನಡೆಸಲು ಅಪಾರ ಪರಿಶ್ರಮ ಬೇಕಾಗುತ್ತದೆ ಮತ್ತು ಪ್ರಧಾನ್, ಧೈರ್ಯ ಮತ್ತು ಸ್ಪಷ್ಟ ದೃಷ್ಟಿಕೋನ ದೊಂದಿಗೆ ಈ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಅವರು ಪ್ರತಿಯೊಂದು ನೀತಿ ನಿರ್ಧಾರಗಳನ್ನು ರೂಪಿಸುವಾಗ ಲಕ್ಷಾಂತರ ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ತಮ್ಮ ಗಮನದಲ್ಲಿಟ್ಟುಕೊಳ್ಳುತ್ತಿದ್ದರು ಎಂದಿದ್ದಾರೆ.

ನಮ್ಮ ಜೊತೆ ನಿಮ್ಮ ಆಟ ಬೇಡ: ಅಭಿಜಿತ್​ ದೀಪ್ಕೆ

'ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟಿದ್ದಾರೆ. ನಾವು ಸಾಧಿಸಿದ್ದೇವೆ, ಪ್ರಜಾಪ್ರಭುತ್ವ ಗೆದ್ದಿದೆ, ಜಿರಳೆಗಳು ಗೆದ್ದಿವೆ. ಈಗ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡಬೇಕು ಮತ್ತು ಪೊಲೀಸರ ದೌರ್ಜನ್ಯದ ವಿರುದ್ಧ ಕ್ರಮ ಜರುಗಬೇಕು ಎಂದಿದ್ದಾರೆ.
ವಿದ್ಯಾರ್ಥಿಗಳ ಪೊಲೀಸರು ಲಾಠಿ ಬೀಸಿದ್ದೀರಿ ಅಲ್ವಾ? ನಮ್ಮ ಜೊತೆ ನಿಮ್ಮ ಆಟ ಬೇಡ. ವಿದ್ಯಾರ್ಥಿಗಳ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಕಾಕ್ರೋಚ್​ ಪಾರ್ಟಿ ಸ್ಥಾಪಕ ಅಭಿಜಿತ್​ ದೀಪ್ಕೆ ಹೇಳಿದ್ದಾರೆ, (ಏಜನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net