ಖಾಸಗಿ ಮಾಧ್ಯವಮೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡುತ್ತಾ ಮಂದಾಕಿನಿ, ಜನರು ಏನೆಲ್ಲಾ ಮಾತನಾಡಿಕೊಳ್ಳುತ್ತಾರೆ ಅಥವಾ ಬರೆಯುತ್ತಾರೆ ಎಂಬುದನ್ನು ನಿಯಂತ್ರಿಸಲು ನಮ್ಮಿಂದ ಸಾಧ್ಯವಿಲ್ಲ. ಒಬ್ಬ ಕಲಾವಿದೆಯಾಗಿ ನಾವು ಸಾರ್ವಜನಿಕವಾಗಿ ಅನೇಕ ಜನರನ್ನು ಭೇಟಿಯಾಗಬೇಕಾಗುತ್ತದೆ ಎಂದಿದ್ದಾರೆ. ಮುಂದುವರಿದು ಸ್ಪಷ್ಟಪಡಿಸಿದ ಅವರು, ನಾನು ದುಬೈಗೆ ಕೇವಲ ಒಂದು ಕಾರ್ಯಕ್ರಮಕ್ಕಾಗಿ ಹೋಗಿದ್ದೆ ಹೊರತು, ದಾವೂದ್ ಇಬ್ರಾಹಿಂ ನನ್ನನ್ನು ವಿಶೇಷವಾಗಿ ಆಹ್ವಾನಿಸಿರಲಿಲ್ಲ ಎಂದು ಆ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.