ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯ ರಣಕಣ ಸಜ್ಜಾಗುತ್ತಿದ್ದು, ಆಡಳಿತಾರೂಢ ಎನ್‌ಡಿಎ (NDA) ಮೈತ್ರಿಕೂಟವು ತನ್ನ ಸೀಟು ಹಂಚಿಕೆಯ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಭಾನುವಾರ ರಾಜ್ಯ ಬಿಜೆಪಿ ಪ್ರಧಾನ ಕಛೇರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ(Himanta Biswa Sharma), ಮೈತ್ರಿಕೂಟದ ಸೀಟು ಹಂಚಿಕೆ ಈಗ ಡನ್ ಡೀಲ್ ಎಂದಿದ್ದಾರೆ. ಯಾರು ಎಲ್ಲಿ ಸ್ಪರ್ಧಿಸಬೇಕು ಎಂಬುದು ಅಂತಿಮವಾಗಿದೆ ಎಂದು ಘೋಷಿಸುವ ಮೂಲಕ ವಿರೋಧ ಪಕ್ಷಗಳಿಗೆ ಶಾಕ್ ನೀಡಿದ್ದಾರೆ.