ಚುನಾವಣಾ ವ್ಯವಸ್ಥೆ ದುರ್ಬಲಗೊಳಿಸಲು ಆಯೋಗವನ್ನು ಗುರಿಯಾಗಿಸಿಕೊಂಡಿದೆ: ಕಾಂಗ್ರೆಸ್ ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿ | Smriti Irani

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಬೆಂಬಲ ಪಡೆಯುವಲ್ಲಿ ವಿಫಲವಾದ ಬಳಿಕ ದೇಶದಲ್ಲಿ ಚುನಾವಣಾ ವ್ಯವಸ್ಥೆ ದುರ್ಬಲಗೊಳಿಸಲು ಕಾಂಗ್ರೆಸ್ ಆಯೋಗವನ್ನು ಗುರಿಯಾಗಿಸಿಕೊಂಡಿದೆ ಎಂದು ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸ್ಮೃತಿ ಇರಾನಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸ್ಮೃತಿ ಇರಾನಿ
Published on: 

ನವದೆಹಲಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಬೆಂಬಲ ಪಡೆಯುವಲ್ಲಿ ವಿಫಲವಾದ ಬಳಿಕ ದೇಶದಲ್ಲಿ ಚುನಾವಣಾ ವ್ಯವಸ್ಥೆ ದುರ್ಬಲಗೊಳಿಸಲು ಕಾಂಗ್ರೆಸ್ ಆಯೋಗವನ್ನು ಗುರಿಯಾಗಿಸಿಕೊಂಡಿದೆ ಎಂದು ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಮಂಗಳವಾರ(ಸೆ. 29) ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಸಿಇಸಿ ಜ್ಞಾನೇಶ್ ಕುಮಾರ್​​ರನ್ನು ತಕ್ಷಣವೇ ಹುದ್ದೆಯಿಂದ ತೆಗೆದುಹಾಕಬೇಕು, ಎಸ್‌ಐಆರ್ ಅನ್ನು ರದ್ದುಗೊಳಿಸಬೇಕು. ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ 13 ಕೋಟಿಗೂ ಹೆಚ್ಚು ಹೆಸರುಗಳನ್ನು ಮರುಸ್ಥಾಪಿಸಬೇಕು. ಚುನಾವಣೆಗಳಲ್ಲಿ ಆಯೋಗದೊಂದಿಗಿನ ಮ್ಯಾಚ್-ಫಿಕ್ಸಿಂಗ್ ನಡೆಸಿದ ಆರೋಪದ ಮೇಲೆ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

ಕಾಂಗ್ರೆಸ್ ಸಭೆ ಬಳಿಕ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಿರುಗೇಟು ನೀಡಿದ ಸ್ಮೃತಿ ಇರಾನಿ, ಬ್ರಿಟಿಷ್ ಸಾಮ್ರಾಜ್ಯವನ್ನು ಉಳಿಸಿಕೊಳ್ಳಲು ಸ್ಥಾಪನೆಯಾದ ಕಾಂಗ್ರೆಸ್ ಪಕ್ಷವು ಇಂದು ಭಾರತೀಯ ಚುನಾವಣಾ ಆಯೋಗದ ಮೇಲೆ ದಾಳಿ ನಡೆಸುತ್ತಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಮತ್ತೊಂದಿಲ್ಲ ಎಂದು ಕಿಡಿಕಾರಿದ್ದಾರೆ.

Also Read
ಏಷ್ಯನ್​ ಗೇಮ್ಸ್​ 2026; 4x400 ಮೀಟರ್ ರಿಲೇಯಲ್ಲಿ ಮೊದಲ ಚಿನ್ನದ ಪದಕ ಗೆದ್ದ ಮಹಿಳೆಯರ ತಂಡ: 52ಕ್ಕೆ ಏರಿದ ಭಾರತದ ಪದಕ ಬೇಟೆ | Asian Games
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸ್ಮೃತಿ ಇರಾನಿ

ಮೃತ ವ್ಯಕ್ತಿಗಳು ಮತ್ತು ನಕಲಿ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕತ್ವ ಏಕೆ ಪಟ್ಟು ಹಿಡಿದಿದೆ ಎಂದು ಪ್ರಶ್ನಿಸಿದ ಅವರು, ಬಿಜೆಪಿ ಅಧಿಕಾರದಲ್ಲಿಲ್ಲದ ಹಿಮಾಚಲ ಪ್ರದೇಶ, ಪಂಜಾಬ್, ಕೇರಳ ಮತ್ತು ಕರ್ನಾಟಕದಂತಹ ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕತ್ವವು ಚುನಾವಣಾ ಆಯೋಗಕ್ಕೆ 'ಕ್ಲೀನ್ ಚಿಟ್' ನೀಡುತ್ತಿದೆಯೇ ಎಂದು ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಮಸಿ ಬಳಿಯಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುವುದಾಗಿ 2019ರಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷರು ಹೇಳಿದ್ದರು ಎಂದು ರಾಹುಲ್ ಗಾಂಧಿಯವರನ್ನು ಕುಟುಕಿದ ಇರಾನಿ, ಪ್ರಧಾನಿ ಮೋದಿ ಅವರನ್ನು ಟೀಕಿಸಬಹುದು ಅಥವಾ ಅವರ ಮೇಲೆ ದಾಳಿ ನಡೆಸಬಹುದು. ಆದರೆ ಇಂತಹ ದಾಳಿ ಸಾಂವಿಧಾನಿಕ ಸಂಸ್ಥೆಗಳು ಅಥವಾ ಭಾರತದ ಪ್ರಜಾಪ್ರಭುತ್ವದ ಮೇಲಿನ ಆಕ್ರಮಣಗಳಾಗಿ ಪರಿವರ್ತನೆಯಾಗಬಾರದು ಎಂದಿದ್ದಾರೆ.

Also Read
ತಮಿಳುನಾಡಿನಲ್ಲಿ ಟಿವಿಕೆ ಗೆಲುವು, ಡಿಎಂಕೆ ಸೋಲಿಗೂ ಎಸ್​ಐಆರ್ ಕಾರಣವಲ್ಲ: ಪಿ.ಚಿದಂಬರಂ | P. Chidambaram
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸ್ಮೃತಿ ಇರಾನಿ

ಭಾರತದ ಸಾಂವಿಧಾನಿಕ ವ್ಯವಸ್ಥೆಗಳನ್ನು ದುರ್ಬಲಗೊಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ನಾಯಕತ್ವವು ಯಾವುದೇ ಅವಕಾಶವನ್ನು ಬಿಡುತ್ತಿಲ್ಲ. ಚುನಾವಣಾ ಆಯೋಗವು ಈ ಕುರಿತು ಸಾರ್ವಜನಿಕವಾಗಿ ಸ್ಪಷ್ಟನೆ ನೀಡಿದ್ದರೂ, ಮತದಾರರ ಪಟ್ಟಿಯಲ್ಲಿ ಮೃತ ವ್ಯಕ್ತಿಗಳ ಹೆಸರುಗಳನ್ನು ಹಾಗೆಯೇ ಉಳಿಸಿಕೊಳ್ಳುವಂತೆ ಕಾಂಗ್ರೆಸ್ ನಾಯಕತ್ವ ಏಕೆ ಪಟ್ಟು ಹಿಡಿದಿದೆ? ಎಂದಿದ್ದಾರೆ.

ಭಾರತದ ಜನರು ತಮ್ಮನ್ನು ಬೆಂಬಲಿಸುತ್ತಿಲ್ಲ ಎಂಬ ಅಸಮಾಧಾನ ಕಾಂಗ್ರೆಸ್‌ನಲ್ಲಿದೆ. ಹೀಗಾಗಿ, ತಮ್ಮ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಬದಲು, ಆ ಪಕ್ಷವು ಚುನಾವಣಾ ಆಯೋಗದ ವಿರುದ್ಧವೇ ವಾಗ್ದಾಳಿ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net