ನವದೆಹಲಿ: ಟಿ20 ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ರನ್ ಮಳೆ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಸುರಿದಿದೆ. ದೆಹಲಿ ಕ್ಯಾಪಿಟಲ್ಸ್(DCvsPBKS) ನೀಡಿದ್ದ 265 ರನ್ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್, ಇನ್ನು 7 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಂತ ಹೆಚ್ಚಿನ ಮೊತ್ತವನ್ನು ಯಶಸ್ವಿಯಾಗಿ ಚೇಸ್ ಮಾಡಿದ ಜಾಗತಿಕ ದಾಖಲೆಯನ್ನು ಪಂಜಾಬ್ ಕಿಂಗ್ಸ್ ತನ್ನದಾಗಿಸಿಕೊಂಡಿದೆ.