ಪಶ್ಚಿಮ ಬಂಗಾಳದಿಂದಲೇ ಟಿಎಂಸಿ ಹೆಸರು ಮತ್ತು ಚಿಹ್ನೆ ಅಳಿಸಿ ಹಾಕಲಾಗಿದೆ: ಸಿಎಂ ಸುವೇಂದು ಅಧಿಕಾರಿ | Suvendu Adhikari

ಪಶ್ಚಿಮ ಬಂಗಾಳದಿಂದಲೇ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಅಳಿಸಿಹಾಕಲಾಗಿದೆ ಎಂದು ಶುಕ್ರವಾರ(ಅ. 02) ಸಿಎಂ ಸುವೇಂದು ಅಧಿಕಾರಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ
Published on: 

ಕೋಲ್ಕತ್ತಾ: ಪಶ್ಚಿಮ ಬಂಗಾಳದಿಂದಲೇ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಅಳಿಸಿಹಾಕಲಾಗಿದೆ ಎಂದು ಶುಕ್ರವಾರ(ಅ. 02) ಸಿಎಂ ಸುವೇಂದು ಅಧಿಕಾರಿ ಹೇಳಿದ್ದಾರೆ.

ಅಕ್ಟೋಬರ್ 6 ರಂದು ನಡೆಯಲಿರುವ ನಂದಿಗ್ರಾಮ ಮತ್ತು ರೆಜಿನಗರ ಉಪಚುನಾವಣೆಯಲ್ಲಿ ಪಕ್ಷದ ನಾಯಕತ್ವದ ಬಗ್ಗೆ ಎರಡು ಬಣಗಳ ನಡುವೆ ವಿವಾದ ಹಿನ್ನೆಲೆ ಮಮತಾ ಬ್ಯಾನರ್ಜಿ ಮತ್ತು ಅರೂಪ್ ರಾಯ್ ಅವರ ಬಣಗಳಿಗೆ ಚುನಾವಣಾ ಆಯೋಗವು ವಿಭಿನ್ನ ಹೆಸರುಗಳು ಮತ್ತು ಚಿಹ್ನೆಗಳನ್ನು ಹಂಚಿಕೆ ಮಾಡಿದೆ.

ಈ ಕುರಿತು ನಂದಿಗ್ರಾಮ ಉಪಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಹಸಿರಾಣಿ ರಾಥ್ ಪರವಾಗಿ ಪ್ರಚಾರ ನಡೆಸುವ ವೇಳೆ ಸಿಎಂ ಸುವೇಂದು ಅಧಿಕಾರಿ ಅವರು, ರಾಜ್ಯದಿಂದ ತೃಣಮೂಲ ಕಾಂಗ್ರೆಸ್‌ನ ಹೆಸರು ಮತ್ತು ಚಿಹ್ನೆಯನ್ನು ಅಳಿಸಿಹಾಕಲಾಗಿದೆ ಎಂದು ಹೇಳಿದ್ದಾರೆ.

ಮೇ ತಿಂಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು, ಟಿಎಂಸಿ 15 ವರ್ಷಗಳ ಕಾಲ ಪಶ್ಚಿಮ ಬಂಗಾಳವನ್ನು ಆಳಿತು. ರಾಜ್ಯದಲ್ಲಿನ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವರ ಬಂಧನವಾಗಿದೆ. ಯಾರ ಹೆಸರನ್ನೂ ನೇರವಾಗಿ ಪ್ರಸ್ತಾಪಿಸದೆ, ಮುಖ್ಯ ಕಳ್ಳನೂ ಜೈಲಿಗೆ ಹೋಗುತ್ತಾನೆ ಎಂದಿದ್ದಾರೆ.

Also Read
ಧರ್ಮ ಕಾರಣವೇ?: ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೌರ್ಯದ ಕುರಿತು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮೌನ ಪ್ರಶ್ನಿಸಿದ ಬಿಜೆಪಿ | BJP
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ಭವಾನಿಪುರದಲ್ಲಿ ಗೆದ್ದ ಬಳಿಕ, ಮಮತಾ ಬ್ಯಾನರ್ಜಿ ಅವರ ಪಕ್ಷದ ಅಸ್ತಿತ್ವವೇ ಇರುವುದಿಲ್ಲ ಎಂದು ನಾನು ಹೇಳಿದ್ದೆ. ಈಗ ಮಮತಾ ಬ್ಯಾನರ್ಜಿ ಮತ್ತು ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ಪಕ್ಷವು, ಎಷ್ಟೇ ಪ್ರಯತ್ನಿಸಿದರೂ ಇವಿಎಂನಲ್ಲಿ ಎರಡು ಹೂವು ಮತ್ತು ಹುಲ್ಲು' ಚಿಹ್ನೆಯನ್ನು ಕಾಣುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

2007ರ ಭೂಸ್ವಾಧೀನ ವಿರೋಧಿ ಚಳವಳಿಯ ಕಾಲದಿಂದಲೂ ನಂದಿಗ್ರಾಮದ ರಾಜಕೀಯದಲ್ಲಿ ಸಕ್ರಿಯರಾಗಿರುವ ಅಧಿಕಾರಿ, ಅಲ್ಪಸಂಖ್ಯಾತ ಸಮುದಾಯದ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಸ್ನೇಹದ ಹಸ್ತ ಚಾಚಲು ನಿಮಗೆ ಇದಕ್ಕಿಂತ ಉತ್ತಮ ಅವಕಾಶ ಸಿಗುವುದಿಲ್ಲ ಎಂದಿದ್ದಾರೆ.

ಮುಂದುವರೆದು, ಅಲ್ಪಸಂಖ್ಯಾತರ ಮೇಲೆ ಜೈ ಶ್ರೀ ರಾಮ್ ಘೋಷಣೆಯನ್ನು ಕೂಗುವಂತೆ ಯಾವುದೇ ಒತ್ತಡವಿಲ್ಲ. ಒಂದು ವೇಳೆ ನಿಮಗೆ 'ಜೈ ಶ್ರೀ ರಾಮ್' ಎಂದು ಹೇಳಲು ಇಷ್ಟವಿಲ್ಲದಿದ್ದರೆ, ಹೇಳಬೇಡಿ. ಬದಲಿಗೆ 'ಭಾರತ ಮಾತಾ ಕಿ ಜೈ' ಎಂದು ಹೇಳಿ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net