ಶುಕ್ರವಾರ(ಜೂ. 05) ಗುಜರಾತ್‌ನ ಸೂರತ್‌ನಲ್ಲಿ ಸುಮಾರು 18,800 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾವಲಂಬನೆಯತ್ತ ಭಾರತದ ಪ್ರಯಾಣವನ್ನು ಎತ್ತಿ ತೋರಿಸಿದರು. ಇಂದು ದೇಶದಲ್ಲಿ ಕೆಲವು ನಿರಾಶಾವಾದಿಗಳು 'ಆತ್ಮನಿರ್ಭರ ಭಾರತ' ಅಭಿಯಾನವನ್ನು ನಿರಂತರವಾಗಿ ಅಪಹಾಸ್ಯ ಮಾಡುತ್ತಿದ್ದಾರೆ. ಅವರು ದೇಶದ ಈ ಸಂಕಲ್ಪವನ್ನು ನಿರಂತರವಾಗಿ ಕಡಿಮೆ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.