ದೇಣಿಗೆ ಹಣದ ದುರುಪಯೋಗದ ವಿಚಾರ ಹೊರಬರುತ್ತಿದ್ದಂತೆ ಅಲರ್ಟ್ ಆಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಪ್ಪಿತಸ್ಥರಿಗೆ ಯಾವುದೇ ಕಾರಣಕ್ಕೂ ವಿನಾಯಿತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಹಗರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೋ, ಅವರಿಗೆ ಕಾನೂನಿನ ಅಡಿಯಲ್ಲಿ ಅತ್ಯಂತ ಕಠಿಣ ಮತ್ತು ಮಾದರಿ ಶಿಕ್ಷೆ ವಿಧಿಸಲಾಗುವುದು. ಪ್ರಕರಣದ ತ್ವರಿತ ವಿಚಾರಣೆ ನಡೆಸಿ ನ್ಯಾಯ ಒದಗಿಸಲಾಗುವುದು,ಎಂದು ಯೋಗಿ ಭರವಸೆ ನೀಡಿದ್ದಾರೆ, (ಏಜನ್ಸೀಸ್).