ಇದು ಪ್ರಜಾಪ್ರಭುತ್ವದ ಗೆಲುವು: ಜೆನ್​ಝಿಗಳ ಹೋರಾಟದ ಫಲ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಅರವಿಂದ್​ ಕೇಜ್ರಿವಾಲ್​ ಹರ್ಷ! Arvind Kejriwal on Dharmendra Pradhan Resignation

ಇದು ಪ್ರಜಾಪ್ರಭುತ್ವದ ಹಾಗೂ ಜೆನ್-ಝಿ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ಗೆಲುವು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್
ಇದು ಪ್ರಜಾಪ್ರಭುತ್ವದ ಹಾಗೂ ಜೆನ್-ಝಿ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ಗೆಲುವು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್
Published on

ಪ್ರಮುಖ ಮುಖ್ಯಾಂಶಗಳು

  • ನೀಟ್ ಯುಜಿ ಪರೀಕ್ಷಾ ಅಕ್ರಮ ವಿವಾದ
  • ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
  • ಇದು ಪ್ರಜಾಪ್ರಭುತ್ವದ ಹಾಗೂ ಜೆನ್-ಝಿ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಕ್ಕ ಗೆಲುವು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್
ನವದೆಹಲಿ: ಕಳೆದ ಒಂದು ತಿಂಗಳಿನಿಂದ ನೀಟ್​ ಯುಜಿ ಪರೀಕ್ಷೆಯಲ್ಲಿ ನಡಿದಿದ್ದ ಅಕ್ರಮವನ್ನು ವಿರೋಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ಅವರ ರಾಜೀನಾಮೆಯನ್ನು ಕೋರಿ, ಕಾಕ್ರೋಚ್​ ಜನತಾ ಪಾರ್ಟಿ ದೆಹಲಿಯ ಜಂತರ್​ ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿತ್ತು.
ಇಂದು ಈ ಹೋರಾಟಕ್ಕೆ ಅಂತೀಮ ಜಯ ಎಂಬಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಪ್ರಧಾನ್​ ನೀಡಿದ ರಾಜೀನಾಮೆ ಕುರಿತು ರಾಷ್ಟ್ರ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ದೆಹಲಿಯ ಮಾಜಿ ಸಿಎಂ ಅರವಿಂದ್​ ಕೇಜ್ರಿವಾಲ್​ (Arvind Kejriwal on Dharmendra Pradhan Resignation) ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಧಾನ್​ ರಾಜೀನಾಮೆ; ಪ್ರಜಾಪ್ರಭುತ್ವದ ಗೆಲುವು!

ಧರ್ಮೇಂದ್ರ ಪ್ರಧಾನ್​ ರಾಜೀನಾಮೆ ಘೋಷಿಸುತ್ತಿದ್ದಂತೆ ಸೋಷಿಯಲ್​ ಮೀಡಿಯಾನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಅರವಿಂದ್​ ಕೇಜ್ರಿವಾಲ್​, ಧರ್ಮೇಂದ್ರ ಪ್ರಧಾನ್​ ರಾಜೀನಾಮೆ ನೀಡಿದ್ದಾರೆ, ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಗೆಲುವಾಗಿದ್ದು, ಈ ಹೋರಾಟದಲ್ಲಿ ಭಾಗವಹಿಸಿದ ಎಲ್ಲರಿಗೂ, ಅದರಲ್ಲೂ ಜೆನ್​ಝಿಗಳಿಗೆ ವಿಶೇಷ ಅಭಿನಂದನೆ ಎಂದಿದ್ದಾರೆ. 
ಜನರಿಗೆ ಪ್ರಜಾಪ್ರಭುತ್ವದ ಮೇಲೆಯೇ ವಿಶ್ವಾಸ ಕಳೆದುಹೋಗಿತ್ತು, ತಮ್ಮ ಹಕ್ಕಿಗಾಗಿ ಬಿದಿಗೀಳುದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಈ ರಾಜೀನಾಮೆ ಭಾರತದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. 

ನಮ್ಮ ಜೊತೆ ನಿಮ್ಮ ಆಟ ಬೇಡ: ಅಭಿಜಿತ್​ ದೀಪ್ಕೆ

'ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟಿದ್ದಾರೆ. ನಾವು ಸಾಧಿಸಿದ್ದೇವೆ, ಪ್ರಜಾಪ್ರಭುತ್ವ ಗೆದ್ದಿದೆ, ಜಿರಳೆಗಳು ಗೆದ್ದಿವೆ. ಈಗ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡಬೇಕು ಮತ್ತು ಪೊಲೀಸರ ದೌರ್ಜನ್ಯದ ವಿರುದ್ಧ ಕ್ರಮ ಜರುಗಬೇಕು ಎಂದಿದ್ದಾರೆ. 
ವಿದ್ಯಾರ್ಥಿಗಳ ಪೊಲೀಸರು ಲಾಠಿ ಬೀಸಿದ್ದೀರಿ ಅಲ್ವಾ? ನಮ್ಮ ಜೊತೆ ನಿಮ್ಮ ಆಟ ಬೇಡ. ವಿದ್ಯಾರ್ಥಿಗಳ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಕಾಕ್ರೋಚ್​ ಪಾರ್ಟಿ ಸ್ಥಾಪಕ ಅಭಿಜಿತ್​ ದೀಪ್ಕೆ ಹೇಳಿದ್ದಾರೆ, (ಏಜನ್ಸೀಸ್​). 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net