ಚೀನಾದ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಕ್ಕಿಂತ ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುವುದೇ ಮುಖ್ಯ ಎಂದು ಖಂಡು ಹೇಳಿದ್ದಾರೆ. ಅರುಣಾಚಲ ಪ್ರದೇಶದಲ್ಲಿ ರಸ್ತೆ, ಸೇತುವೆ, ಸುರಂಗ ಮಾರ್ಗಗಳು, ಗಡಿ ಸಂಪರ್ಕ ವ್ಯವಸ್ಥೆ ಹಾಗೂ ಜಲವಿದ್ಯುತ್ ಯೋಜನೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.