ಬೆಂಗಳೂರು: ಟಿ20 ವಿಶ್ವಕಪ್ 2026ರ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಮಣಿಸಿದ ಭಾರತ, ವಿಶ್ವಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ಟೂರ್ನಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಸಂಜು ಸ್ಯಾಮ್ಸನ್ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಆದರೆ, ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್(AB deVilliers) ಈ ನಿರ್ಧಾರದ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದು, ಈ ಪ್ರಶಸ್ತಿ ಜಸ್ಪ್ರೀತ್ ಬುಮ್ರಾ ಅವರಿಗೆ ಸಿಗಬೇಕಿತ್ತು ಎಂದು ಹೇಳಿದ್ದಾರೆ.