ಅಹಮದಾಬಾದ್: ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯಲ್ಲಿ 23 ವರ್ಷದ ಯುವಕನನ್ನು ಆತನ ತಂದೆ-ತಾಯಿಯೇ ಕೊಲೆ ಮಾಡಿ, ಅದನ್ನು ಆತ್ಮಹತ್ಯೆ(suicide) ಎಂದು ಬಿಂಬಿಸಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆಯಲ್ಲಿ ಇದು ಕೊಲೆ ಎಂಬುದು ದೃಢಪಟ್ಟ ಬಳಿಕ, ಮೃತನ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.