ಬಿಧಾನ್ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಖಗೇಂದ್ರನಾಥ್ ಮಹಾತೋಗೆ ಬಿಜೆಪಿ ಧ್ವಜ ನೀಡಿ ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಸುವೇಂದು ಅಧಿಕಾರಿ, ಖಗೇಂದ್ರನಾಥ್ ಒಬ್ಬ ವೈದ್ಯರಾಗಿದ್ದು, ಟಿಎಂಸಿ ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ಹೋರಾಡುವ ಹಂಬಲದಿಂದ ಇಂದು ನಮ್ಮ ಪಕ್ಷಕ್ಕೆ ಸೇರಿದ್ದಾರೆ ಎಂದರು. ಗೋಪಿಬಲ್ಲವ್ಪುರವು ಬಿಜೆಪಿ ಆಡಳಿತವಿರುವ ಒಡಿಶಾದೊಂದಿಗೆ ಗಡಿ ಹಂಚಿಕೊಂಡಿದ್ದು, ಅಲ್ಲಿನ ಉತ್ತಮ ಆಡಳಿತದಿಂದ ಪ್ರಭಾವಿತರಾಗಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.