ಟ್ಯಾಂಕ್‌ನಲ್ಲಿ ಈಗಾಗಲೇ ಸಂಗ್ರಹವಾಗಿದ್ದ ತೀವ್ರವಾದ ವಿಷಕಾರಿ ಅನಿಲದ ವಾಸನೆಯಿಂದ ಉಸಿರುಗಟ್ಟಿ ನಾಲ್ವರು ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಪೊಲೀಸರು ನಾಲ್ವರ ಶವಗಳನ್ನು ಹೊರತೆಗೆದಿದ್ದು, ಆಸ್ಪತ್ರಗೆ ಸಾಗಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಕಾರ್ಮಿಕರು ಯಾವುದೇ ಸುರಕ್ಷತಾ ಮುಖವಾಡಗಳನ್ನು ಧರಿಸಿರಲಿಲ್ಲ ಎನ್ನಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬಳಿಕ ನಿಖರ ಕಾರಣ ತಿಳಿಯಲಿದೆ (ಏಜೆನ್ಸೀಸ್).