ಗಂಗಾ ನದಿಯಲ್ಲಿ ದುರಂತ; ದೋಣಿ ಮಗುಚಿ 14 ಮಂದಿ ಸಾವು; ಆರು ಮಂದಿ ರಕ್ಷಣೆ |boat capsizes

ಬಿಹಾರದ ವೈಶಾಲಿ ಜಿಲ್ಲೆಯ ರಾಘೋಪುರ ಬಳಿ ಗಂಗಾ ನದಿಯಲ್ಲಿ ಬೀಕರ ದುರಂತ ನಡೆದಿದ್ದು, 30 ಮಂದಿಯನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಕನಿಷ್ಠ 14 ಜನ ಮೃತಪಟ್ಟಿದ್ದು, ಹಲವರು ಕಾಣೆಯಾಗಿದ್ದಾರೆ ಎಂದು ಬುಧವಾರ(ಅ. 14) ವರದಿಯಾಗಿದೆ.
ಗಂಗಾ ನದಿಯಲ್ಲಿ ದುರಂತ; ದೋಣಿ ಮಗುಚಿ 14 ಮಂದಿ ಸಾವು; ಆರು ಮಂದಿ ರಕ್ಷಣೆ |boat capsizes
Published on: 

ಪಾಟ್ನಾ: ಬಿಹಾರದ ವೈಶಾಲಿ ಜಿಲ್ಲೆಯ ರಾಘೋಪುರ ಬಳಿ ಗಂಗಾ ನದಿಯಲ್ಲಿ ಬೀಕರ ದುರಂತ ನಡೆದಿದ್ದು, 30 ಮಂದಿಯನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಕನಿಷ್ಠ 14 ಜನ ಮೃತಪಟ್ಟಿದ್ದು, ಹಲವರು ಕಾಣೆಯಾಗಿದ್ದಾರೆ ಎಂದು ಬುಧವಾರ(ಅ. 14) ವರದಿಯಾಗಿದೆ.

ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ವೈಶಾಲಿ ಜಿಲ್ಲೆಯ ರಾಂಪುರ ಶ್ಯಾಮಚಂದ್ ಗ್ರಾಮದ ನಿವಾಸಿಗಳು ನದಿಯ ಆಚೆಯ ಹಳ್ಳಿಯಲ್ಲಿ ನಡೆದ ಹಬ್ಬದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ನದಿಯ ಮಧ್ಯದಲ್ಲಿ ದೋಣಿ ಮುಳುಗಿದೆ ಎನ್ನಲಾಗಿದೆ.

ಘಟನೆ ಮಾಹಿತಿ ತಿಳಿದ ತಕ್ಷಣ ಪೊಲೀಸರು, ಎಸ್​ಡಿಆರ್​ಎಫ್ ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಘಟನೆಯಲ್ಲಿ ಆರು ಮಂದಿಯನ್ನು ರಕ್ಷಿಸಲಾಗಿದೆ. ವೈಶಾಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ವರ್ಷಾ ಸಿಂಗ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಶುಭಂಕರ್ ಮಿಶ್ರಾ ಅವರ ಮೇಲ್ವಿಚಾರಣೆಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Also Read
"ಸೋತಾಗಲೆಲ್ಲಾ ನೆಪ ಹುಡುಕೋದು ಬಿಟ್ಟು ಆತ್ಮಾವಲೋಕನ ಮಾಡ್ಕೊಳ್ಳಿ!": ರಾಹುಲ್ ಗಾಂಧಿಗೆ ಅಮಿತ್ ಶಾ ಖಡಕ್ ತಿರುಗೇಟು | Amit Shah
ಗಂಗಾ ನದಿಯಲ್ಲಿ ದುರಂತ; ದೋಣಿ ಮಗುಚಿ 14 ಮಂದಿ ಸಾವು; ಆರು ಮಂದಿ ರಕ್ಷಣೆ |boat capsizes

ಈ ಕುರಿತು ಮಾತನಾಡಿರುವ ವೈಶಾಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ವರ್ಷಾ ಸಿಂಗ್, ರಾಘೋಪುರದ ಗಂಗಾ ನದಿಯಲ್ಲಿ ದೋಣಿ ಮಗುಚಿದ ನಂತರ 14 ಜನರು ಸಾವನ್ನಪ್ಪಿದ್ದಾರೆ ಮತ್ತು ಆರು ಜನರನ್ನು ರಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ

ಘಟನೆ ಬಗ್ಗೆ ಪ್ರಧಾನಿ ಮೋದಿ ಅವರು ಎಕ್ಸ್​ನಲ್ಲಿ ದುಃಖ ವ್ಯಕ್ತಪಡಿಸಿದ್ದು, ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದ ದೋಣಿ ದುರ್ಘಟನೆಯಲ್ಲಿ ಪ್ರಾಣಹಾನಿಯಾಗಿರುವುದು ಅತ್ಯಂತ ನೋವಿನ ಸಂಗತಿ ಎಂದು ಕಂಬನಿ ಮಿಡಿದಿದ್ದಾರೆ. ಮತ್ತು ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಸಂತ್ರಸ್ತರಿಗೆ ಸ್ಥಳೀಯ ಆಡಳಿತದಿಂದ ಎಲ್ಲಾ ರೀತಿಯ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ಘೋಷಿಸಲಾಗಿದೆ. ಹಾಗೂ ಗಾಯಗೊಂಡ ಪ್ರತಿಯೊಬ್ಬರಿಗೂ 50,000 ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿ ಪಿಎಂಓ ಪ್ರಕಟಿಸಿದೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net