ಇದೇ ವಿಷಯವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ತಮ್ಮ ಮತ್ತು ಟ್ರಂಪ್ ನಡುವಿನ ಸಂಭಾಷಣೆಯನ್ನು ದೃಢಪಡಿಸಿದರು ಮತ್ತು ಸುಂಕ ಕಡಿತವನ್ನು ಸ್ವಾಗತಿಸಿದರು. ಇಂದು ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಿದ್ದು ಅದ್ಭುತ ಅನುಭವ, ಭಾರತದಲ್ಲಿ ತಯಾರಿಸಿದ ಉತ್ಪನ್ನಗಳು ಈಗ 18% ರಷ್ಟು ಕಡಿಮೆ ಸುಂಕವನ್ನು ಹೊಂದಿರುವುದು ಸಂತೋಷ ತಂದಿದೆ ಎಂದು ಪ್ರಧಾನಿ ಹೇಳಿದ್ದು, ಭಾರತದ 1.4 ಬಿಲಿಯನ್ ಜನರ ಪರವಾಗಿ ಟ್ರಂಪ್ಗೆ ಧನ್ಯವಾದ ಅರ್ಪಿಸಿದ್ದಾರೆ.