ತ್ವಿಷಾ, ಮೇ 12ರಂದು ಭೋಪಾಲ್‌ನ ಕಟಾರಾ ಹಿಲ್ಸ್ನಲ್ಲಿನ ತಮ್ಮ ಪತಿ, ವಕೀಲ ಸಮರ್ಥ್ ಸಿಂಗ್ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದ ಈ ಜೋಡಿ, ಕಳೆದ ಡಿಸೆಂಬರ್‌ನಲ್ಲಿ ದಾಂಪತ್ಯಕ್ಕೆ ಕಾಲಿಟ್ಟರು. ಸಾವಿಗೂ ಮುನ್ನ ತಾಯಿಗೆ ಮೆಸೇಜ್ ಮಾಡಿದ್ದ ತ್ವಿಷಾ, 'ಅಮ್ಮ ನನ್ನ ಜೀವನ ನರಕವಾಗಿದೆ. ದಯವಿಟ್ಟು ನನ್ನನ್ನು ಇಲ್ಲಿಂದ ಕರೆದುಕೊಂಡುಹೋಗಿ, ಅವರು ನನ್ನನ್ನು ಬದುಕಲು ಬಿಡುವುದಿಲ್ಲ. ನನಗಿಲ್ಲಿ ಉಸಿರುಗಟ್ಟುತ್ತಿದೆ' ಎಂದು ಬೇಡಿಕೊಂಡಿದ್ದರು.