ಯುಜಿಸಿಇಟಿ ಮೊದಲ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಇಂದು ಸಂಜೆ 5ರವರೆಗೆ ಮಾತ್ರ ಅವಕಾಶ! UGCET

UGCET ಸಾಂದರ್ಭಿಕ ಚಿತ್ರ
UGCET ಸಾಂದರ್ಭಿಕ ಚಿತ್ರ
Published on
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ (UGCET) ಪ್ರವೇಶಾತಿಗಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮಹತ್ವದ ಸುದ್ದಿಯೊಂದನ್ನು ನೀಡಿದೆ. ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರವು ಸೋಮವಾರ (ಜು 13) ರಾತ್ರಿಯೇ ಅಧಿಕೃತವಾಗಿ ಪ್ರಕಟಿಸಿದೆ.
ನಿಗದಿತ ವೇಳಾಪಟ್ಟಿಯ ಪ್ರಕಾರ ಈ ಫಲಿತಾಂಶವು ಜುಲೈ 14ರಂದು ಹೊರಬರಬೇಕಿತ್ತಾದರೂ, ನಿಗದಿಗಿಂತ ಮುಂಚಿತವಾಗಿಯೇ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಎಚ್. ಪ್ರಸನ್ನ ಅವರು ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಅಭ್ಯರ್ಥಿಗಳು ಜುಲೈ 9ರ ಬೆಳಿಗ್ಗೆ 11 ಗಂಟೆಯವರೆಗೆ ದಾಖಲಿಸಿದ್ದ ಇಚ್ಛೆ ಹಾಗೂ ಆಯ್ಕೆಗಳ ಆಧಾರದ ಮೇಲೆ ಈ ತಾತ್ಕಾಲಿಕ ಫಲಿತಾಂಶವನ್ನು ಸಿದ್ಧಪಡಿಸಿ ಪ್ರಕಟಿಸಲಾಗಿದೆ. ಒಂದು ವೇಳೆ ಪ್ರಕಟಿತ ತಾತ್ಕಾಲಿಕ ಫಲಿತಾಂಶದಲ್ಲಿ ಯಾವುದೇ ರೀತಿಯ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಜುಲೈ 14ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ (ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net