

ನವದೆಹಲಿ: ದೇಶದಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ವಿಶೇಷ ಪರಿಷ್ಕರಣೆ (SIR) ನೀತಿಯನ್ನು ಕೂಡಲೇ ಕೈಬಿಡುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು, ಶನಿವಾರ (ಅ.10) ಕಾಕ್ರೋಚ್ ಜನತಾ ಪಾರ್ಟಿ (CJP) ದೆಹಲಿಯ ಜಂತರ್-ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದೆ.
ಆದರೆ, ಪ್ರತಿಭಟನಾ ಸ್ಥಳಕ್ಕೆ ಕಾಕ್ರೋಚ್ ಜನತಾ ಪಾರ್ಟಿ ನಾಯಕರು ತಲುಪುವ ಮೊದಲೇ, ದೆಹಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ. ಪೊಲೀಸರ ಈ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಖ್ಯಾತ ಪರಿಸರವಾದಿ ಸೋನಮ್ ವಾಂಗ್‌ಚುಕ್ ಮತ್ತೊಮ್ಮೆ ಉಪವಾಸ ಸತ್ಯಾಗ್ರಹ ಆರಂಭಿಸುವ ಎಚ್ಚರಿಕೆ ನೀಡಿದ್ದಾರೆ.
ಇಂದು ನಡೆಯಲಿರುವ ಪ್ರತಿಭಟನೆಯಲ್ಲಿ ಒಗ್ಗಟ್ಟು ಹಾಗೂ ಶಾಂತಿಯನ್ನು ಕಾಪಾಡಿಕೊಳ್ಳುವಂತೆ ನಾನು ನಿನ್ನೆ ಮನವಿ ಮಾಡಿಕೊಂಡಿದ್ದೆ. ಆದರೆ ಇಂದು ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಘೋಷಣೆಯಾಗಲಿದೆ ಎಂದು ನಾನು ಭಾವಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ.
ಈ ಚಳುವಳಿಯನ್ನು ಮುನ್ನಡೆಸಲು ಅನೇಕ ನಾಯಕರು ತಯಾರಾಗಿದ್ದಾರೆಂದು ನನಗೆ ಬಹಳ ಸಂತೋಷವಾಗಿತ್ತು. ಆದರೆ ಅವರನ್ನಲ್ಲಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆಂದು ನನಗೆ ಈಗ ತಿಳಿಯಿತು. ನಾಳೆ (ಭಾನುವಾರ) ಯೊಳಗೆ ಬಂಧಿಸಿರುವ ಎಲ್ಲಾ ಪ್ರತಿಭಟನಾಕಾರರನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಮತ್ತೊಮ್ಮೆ ಉಪವಾಸ ಸತ್ಯಾಗ್ರಹ ಅಥವಾ ಪಾದಯಾತ್ರೆಯನ್ನ ಆರಂಭಿಸಲು ಯೋಚಿಸುತ್ತಿದ್ದೆನೆಂದು ಸೋನಮ್ ವಾಂಗ್‌ಚುಕ್ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ದೇಶದಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ವಿಶೇಷ ಪರಿಷ್ಕರಣೆ (SIR) ನೀತಿಯನ್ನು ಕೂಡಲೇ ಕೈಬಿಡುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು, ಕಾಕ್ರೋಚ್ ಜನತಾ ಪಾರ್ಟಿ (CJP) ದೆಹಲಿಯ ಜಂತರ್-ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದೆ.
ಆದರೆ, ಪ್ರತಿಭಟನೆಗೂ ಮುನ್ನವೇ, ಸಿಜೆಪಿ ಸ್ಥಾಪಕ ಅಭಿಜಿತ್ ದಿಪ್ಕೆ, ವಕ್ತಾರರಾದ, ಸೌರವ್ ದಾಸ್ ಹಾಗೂ ಆಶುತೋಷ್ ರಾಂಕಾ ಮತ್ತು ಯೂಟ್ಯೂಬರ್ ಧ್ರುವ್ ರಾಠಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಯಾಗಿದೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ಸಿಜೆಪಿ ನಾಯಕರಾದ ಅಭಿಜಿತ್ ದಿಪ್ಕೆ, ಆಶುತೋಷ್ ರಾಂಕಾ, ಸೌರವ್ ದಾಸ್ ಸೇರಿದಂತೆ ಸುಮಾರು 50 ಜನರನ್ನು ವಶಕ್ಕೆ ಪಡೆದಿದ್ದಾರೆ. ತಮ್ಮ ನೆಚ್ಚಿನ ನಾಯಕರನ್ನು ಪ್ರತಿಭಟನಾ ಸ್ಥಳಕ್ಕೆ ಬರದಂತೆ ತಡೆದಿದ್ದಕ್ಕೆ, ಕನ್ನೋಟ್ ಪ್ಲೇಸ್‌ನಲ್ಲಿ ಜಮಾವಣೆಗೊಂಡಿದ್ದ ಪ್ರತಿಭಟನಾಕಾರರು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಪೊಲೀಸರು ತೀವ್ರ ಗಾಯಗೊಂಡಿದ್ದು, ಕಲ್ಲು ತೂರಿದ ಸುಮಾರು 50 ಕ್ಕೂ ಅಧಿಕ ಜನರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ, (ಏಜೆನ್ಸೀಸ್).