ಎಸ್​ಐಆರ್ ಕುರಿತು ಏಕಪಕ್ಷೀಯ ನಿರ್ಧಾರ: ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮ ಕೋರಿ ಸುಪ್ರೀಂಕೋರ್ಟ್​​ಗೆ ಪಿಐಎಲ್​​​ | Supreme Court

ಭಾರತೀಯ ಚುನಾವಣಾ ಆಯೋಗದಲ್ಲಿ ಎಸ್‌ಐಆರ್ ಕುರಿತು ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರ ಆಕ್ಷೇಪಣೆಗಳ ಹೊರತಾಗಿಯೂ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡ ಕುರಿತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿ ಶುಕ್ರವಾರ(ಸೆ. 25) ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಅರ್ಜಿ ಸಲ್ಲಿಸಲಾಗಿದೆ.
gyanesh kumar
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್
Published on: 

ನವದೆಹಲಿ: ಭಾರತೀಯ ಚುನಾವಣಾ ಆಯೋಗದಲ್ಲಿ ಎಸ್‌ಐಆರ್ ಕುರಿತು ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರ ಆಕ್ಷೇಪಣೆಗಳ ಹೊರತಾಗಿಯೂ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡ ಕುರಿತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿ ಶುಕ್ರವಾರ(ಸೆ. 25) ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಅರ್ಜಿ ಸಲ್ಲಿಸಲಾಗಿದೆ.

ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಎಸ್‌ಐಆರ್‌ಗೆ ಸಂಬಂಧಿಸಿದ ನಿರ್ಧಾರಗಳು ಮತ್ತು ಆದೇಶಗಳ ಕುರಿತು ಕನಿಷ್ಠ 14 ಸಂದರ್ಭಗಳಲ್ಲಿ ಆಕ್ಷೇಪಣೆಗಳನ್ನು ದಾಖಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದ ಬಳಿಕ, ಅದನ್ನು ಆಧಾರಿಸಿ ಈ ಪಿಐಎಲ್​ ದಾಖಲಿಸಲಾಗಿದೆ.

Also Read
ಎಸ್​ಐಆರ್​ ವಿವಾದ; ಚುನಾವಣಾ ಆಯೋಗ ಜನರ ನಂಬಿಕೆ ಉಳಿಸಿಕೊಳ್ಳಬೇಕು: ಬಲವಾಗಿ ತಮ್ಮ ವಾದ ಮಂಡಿಸಬೇಕು: ಚಿರಾಗ್ ಪಾಸ್ವಾನ್ | Chirag Paswan
gyanesh kumar

ಬಾರ್ & ಬೆಂಚ್ ವರದಿಯ ಪ್ರಕಾರ, ವಕೀಲ ಚಂದ್ ಖುರೇಷಿ ಮೂಲಕ ಶೈಲೇಂದ್ರ ಮಣಿ ತ್ರಿಪಾಠಿ ಎಂಬುವರು ಈ ಅರ್ಜಿಯನ್ನು ಸಲ್ಲಿಸಿದ್ದು, ಬಹುಪಾಲು ಚುನಾವಣಾ ಆಯುಕ್ತರ ಒಪ್ಪಿಗೆಯಿಲ್ಲದೆ ಚುನಾವಣಾ ಆಯೋಗ ತೆಗೆದುಕೊಂಡ ಎಲ್ಲಾ ನಿರ್ಧಾರಗಳನ್ನು ಕಾನೂನುಬಾಹಿರ ಮತ್ತು ಅನೂರ್ಜಿತವೆಂದು ಘೋಷಿಸುವಂತೆ ಕೋರಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ಕಾಯ್ದೆ-2023ರ ಸೆಕ್ಷನ್ 18ರ ಅಡಿಯಲ್ಲಿ, ಆಯೋಗದ ಸಂಪೂರ್ಣ ಒಪ್ಪಿಗೆಯಿಲ್ಲದೆ ಅಥವಾ ಚುನಾವಣಾ ಆಯುಕ್ತರ ಬಹುಮತದ ಅಭಿಪ್ರಾಯಕ್ಕೆ ವಿರುದ್ಧವಾಗಿ ಸಿಇಸಿ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಕೈಗೊಳ್ಳಲಾದ, ಅನುಮೋದಿಸಲಾದ ಅಥವಾ ಜಾರಿಗೊಳಿಸಲಾದ ಎಲ್ಲಾ ನಿರ್ಧಾರಗಳು, ಮಾರ್ಗಸೂಚಿಗಳು, ನಿರ್ದೇಶನಗಳು ಹಾಗೂ ಸಾಫ್ಟ್‌ವೇರ್ ಬದಲಾವಣೆಗಳನ್ನು ಅಸಂವಿಧಾನಿಕ, ಅಧಿಕಾರ ವ್ಯಾಪ್ತಿಯನ್ನು ಮೀರಿದ ಕ್ರಮ ಮತ್ತು ಆರಂಭದಿಂದಲೇ ಅಸಿಂಧು ಎಂದು ಘೋಷಿಸುವಂತೆ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

Also Read
ಚುನಾವಣೆಯಲ್ಲಿ ಅಕ್ರಮ ನಡೆಯುತ್ತಿದ್ದರೇ ಸ್ಪರ್ಧಿಸುವುದನ್ನು ಬಹಿಷ್ಕರಿಸಿ: ವಿಪಕ್ಷಗಳಿಗೆ ಅಭಿಜಿತ್ ದಿಪ್ಕೆ ಒತ್ತಾಯ | Abhijeet Dipke
gyanesh kumar

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಹಿರಿಯ ಉಪ ಚುನಾವಣಾ ಆಯುಕ್ತ ಮನೀಶ್ ಗಾರ್ಗ್ ಹಾಗೂ ಚುನಾವಣಾ ಆಯೋಗದ ಮಹಾನಿರ್ದೇಶಕರು (ಮಾಹಿತಿ ತಂತ್ರಜ್ಞಾನ) ಸೀಮಾ ಖನ್ನಾ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.

ಅಧಿಕೃತ ಕರ್ತವ್ಯವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿರುವುದು ಕಂಡುಬಂದಿರುವ ಪ್ರತಿವಾದಿಗಳು ಹಾಗೂ ಇತರ ಅಧಿಕಾರಿಗಳ ವಿರುದ್ಧ, ಜನತಾ ಪ್ರಾತಿನಿಧ್ಯ ಕಾಯ್ದೆ, 1950ರ ಸೆಕ್ಷನ್ 32ರ ಅಡಿಯಲ್ಲಿ ದೂರುಗಳನ್ನು ದಾಖಲಿಸಲು ಮತ್ತು ಕಾನೂನು ಕ್ರಮ ಜರುಗಿಸಲು ಶಾಸನಬದ್ಧ ಪ್ರಾಧಿಕಾರಕ್ಕೆ ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net