ಪೊಲೀಸರ ಮಾಹಿತಿ ಪ್ರಕಾರ, 17 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿತ್ತು. ಕಳೆದ ಕೆಲವು ತಿಂಗಳಿಂದ ಭಗೀರಥ್ ಬಾಲಕಿಗೆ ಕಿರುಕುಳ ನೀಡುತ್ತಿದ್ದ ಹಾಗೂ ಮದುವೆಯ ಭರವಸೆ ನೀಡಿ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರಂಭದಲ್ಲಿ ಲೈಂಗಿಕ ಕಿರುಕುಳ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ಸಂಬಂಧಿಸಿದ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದ್ದರೂ, ಬಳಿಕ ಬಾಲಕಿಯ ಹೇಳಿಕೆ ದಾಖಲಿಸಿದ ನಂತರ ಗಂಭೀರ POCSO ಸೆಕ್ಷನ್‌ಗಳನ್ನು ಸೇರಿಸಲಾಗಿದೆ.