ರಾಜ್ಯಸಭಾ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ: ಸ್ಪೀಕರ್ ಅಂಗೀಕಾರ | Hardeep Singh Puri

ಮಧ್ಯಪ್ರದೇಶದಿಂದ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾದ ಕೆಲವು ದಿನಗಳ ಬಳಿಕ ಬಿಜೆಪಿ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ(ನ. 14) ಉತ್ತರ ಪ್ರದೇಶವನ್ನು ಪ್ರತಿನಿಧಿಸುವ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
Published on: 

ನವದೆಹಲಿ: ಮಧ್ಯಪ್ರದೇಶದಿಂದ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾದ ಕೆಲವು ದಿನಗಳ ಬಳಿಕ ಬಿಜೆಪಿ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ(ನ. 14) ಉತ್ತರ ಪ್ರದೇಶವನ್ನು ಪ್ರತಿನಿಧಿಸುವ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯಸಭೆ ಬುಲೆಟಿನ್ ಪ್ರಕಾರ, ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸುವ ರಾಜ್ಯಗಳ ಪರಿಷತ್ತಿನ (ರಾಜ್ಯಸಭೆ) ಚುನಾಯಿತ ಸದಸ್ಯರಾದ ಹರ್ದೀಪ್ ಸಿಂಗ್ ಪುರಿ ಅವರು ತಮ್ಮ ರಾಜ್ಯಸಭೆಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನವೆಂಬರ್ 14 ರಿಂದ ಜಾರಿಗೆ ಬರುವಂತೆ ಸಭಾಪತಿಗಳು ಅಂಗೀಕರಿಸಿದ್ದಾರೆ ತಿಳಿಸಲಾಗಿದೆ.

Also Read
ಸಬರಮತಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ, ಗೋಧ್ರಾ ಗಲಭೆ ಬಗ್ಗೆ ಸೋನಿಯಾ ಗಾಂಧಿ ಅಭಿಪ್ರಾಯಕ್ಕೆ ಮಾಜಿ ಸಿಬಿಐ ಅಧಿಕಾರಿ ಆಕ್ಷೇಪ | Ex CBI officer
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ಕಳೆದ ವಾರ ನಡೆದ ಮಧ್ಯಪ್ರದೇಶದಿಂದ ರಾಜ್ಯಸಭೆ ನಡೆದ ಉಪಚುನಾವಣೆಯಲ್ಲಿ ಇತರ ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡ ಬಳಿಕ ಪುರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಮಾಜಿ ಕೇಂದ್ರ ಸಚಿವ ಎಲ್ ಮುರುಗನ್ ಅವರ ರಾಜೀನಾಮೆಯಿಂದ ಈ ಸ್ಥಾನ ತೆರವಾಗಿತ್ತು (ಏಜೆನ್ಸೀಸ್).