ಆಂಧ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಗಲಾಟೆ, ಹಿಂಸಾಚಾರ: ಮೇಲ್ವಿಚಾರಣೆಗೆ ಅಮಿಕಸ್ ಕ್ಯೂರಿ ನೇಮಕ ಕೋರಿದ ಜಗನ್ | amicus curiae

ಆಂಧ್ರ ಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ರಾಜ್ಯದ ಎನ್‌ಡಿಎ ಸರ್ಕಾರ ಗೌರವಿಸುತ್ತಿಲ್ಲ ಎಂದು ಆರೋಪಿಸಿರುವ ವೈಎಸ್​ಆರ್​​ಸಿಪಿ ಮುಖ್ಯಸ್ಥ ಮತ್ತು ಮಾಜಿ ಸಿಎಂ ವೈಎಸ್ ಜಗನ್​ ಮೋಹನ್ ರೆಡ್ಡಿ, ಚುನಾವಣಾ ಮೇಲ್ವಿಚಾರಣೆಗೆ ಅಮಿಕಸ್ ಕ್ಯೂರಿ ನೇಮಿಸಬೇಕೆಂದು ಕೋರಿದ್ದಾರೆ.
ಜಗನ್​
ಜಗನ್​
Published on: 

ಅಮರಾವತಿ: ಆಂಧ್ರ ಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ರಾಜ್ಯದ ಎನ್‌ಡಿಎ ಸರ್ಕಾರ ಗೌರವಿಸುತ್ತಿಲ್ಲ ಎಂದು ಆರೋಪಿಸಿರುವ ವೈಎಸ್​ಆರ್​​ಸಿಪಿ ಮುಖ್ಯಸ್ಥ ಮತ್ತು ಮಾಜಿ ಸಿಎಂ ವೈಎಸ್ ಜಗನ್​ ಮೋಹನ್ ರೆಡ್ಡಿ, ಚುನಾವಣಾ ಮೇಲ್ವಿಚಾರಣೆಗೆ ಅಮಿಕಸ್ ಕ್ಯೂರಿ ನೇಮಿಸಬೇಕೆಂದು ಕೋರಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ ಗಲಾಟೆ, ಹಿಂಸಾಚಾರ ಹಾಗೂ ವೈಎಸ್​ಆರ್​ಸಿಪಿ ಅಭ್ಯರ್ಥಿಗಳ ನಾಮಪತ್ರ ಕಸಿಯುವಿಕೆಯಂತಹ ದೌರ್ಜನ್ಯಗಳ ಆರೋಪಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಮಾತನಾಡಿರುವ ಜಗನ್, ಟಿಡಿಪಿ ನೇತೃತ್ವದ ಎನ್​ಡಿಎ ಸರ್ಕಾರ ಪ್ರಜಾಪ್ರಭುತ್ವವನ್ನು ಅಣಕ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

Also Read
ಸಿವಾನ್​ನ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: ಹಲವರು ಮೃತಪಟ್ಟಿರುವ ಶಂಕೆ: ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ | firecracker factory
ಜಗನ್​

ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಪಾಲಿಸುತ್ತಿಲ್ಲ. ಪೊಲೀಸರು ಪಕ್ಷಪಾತದಿಂದ ವರ್ತಿಸುತ್ತಿದ್ದಾರೆ. ವೈಎಸ್‌ಆರ್‌ಸಿಪಿ ಅಭ್ಯರ್ಥಿಗಳ ಮೇಲೆ ದಾಳಿ ಮತ್ತು ಮತಪತ್ರಗಳನ್ನು ಕಸಿದುಕೊಳ್ಳುವ ಮೂಲಕ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅರಾಜಕತೆಯನ್ನು ಸೃಷ್ಟಿಸಿದೆ. ZPTC ಮತ್ತು MPTC ನಾಮನಿರ್ದೇಶನಗಳಲ್ಲಿನ ಸ್ಕ್ರಿಪ್ಟ್ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗಿಂತ ಭಿನ್ನವಾಗಿಲ್ಲ ಅಲ್ಲಿಯೂ ಇದೇ ರೀತಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಚುನಾವಣಾ ಪ್ರಕ್ರಿಯೆ ವೇಳೆ ನಡೆದಿರುವ ಎಲ್ಲಾ ಘಟನೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ಮಾಡುತ್ತಿದ್ದೇವೆ. ಮತ್ತು ನ್ಯಾಯಾಲಯಗಳ ಮೊರೆ ಹೋಗುತ್ತೇವೆ. ತಕ್ಷಣ ರಾಜ್ಯದಲ್ಲಿ ಚುನಾವಣೆಯಲ್ಲಿ ನಡೆಸಲು ಕೇಂದ್ರ ಪಡೆಗಳ ನಿಯೋಜನೆ, ಚುನಾವಣಾ ಪ್ರಕ್ರಿಯೆಯ ವೀಡಿಯೊ ರೆಕಾರ್ಡಿಂಗ್, ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳಿಗೆ ರಕ್ಷಣೆ ನೀಡುವುದರ ಜೊತೆಗೆ, ಚುನಾವಣೆಗಳನ್ನು ಮೇಲ್ವಿಚಾರಣೆ ಮಾಡಲು ಅಮಿಕಸ್ ಕ್ಯೂರಿಯನ್ನು ನೇಮಿಸಲು ಆದೇಶಿಸಬೇಕು ಎಂದು ಸುಪ್ರೀಂಕೋರ್ಟ್​ ಅನ್ನು ಕೋರಿದ್ದಾರೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net