ಅಮೆರಿಕದ ನ್ಯಾಯಾಂಗ ಇಲಾಖೆಯು ಕಳೆದ ತಿಂಗಳು ಗೌತಮ್ ಅದಾನಿ ಇತರ ಆರೋಪಿಗಳ ಮೇಲಿದ್ದ ಕ್ರಿಮಿನಲ್ ಆರೋಪಗಳನ್ನು ಕೈಬಿಡುವುದಾಗಿ ಘೋಷಿಸಿತ್ತು. ಈ ಸಂಬಂಧ ಫೆಡರಲ್ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯೂಯಾರ್ಕ್‌ನ ಪೂರ್ವ ಜಿಲ್ಲೆಯ ನ್ಯಾಯಾಧೀಶ ನಿಕೋಲಸ್ ಜಿ. ಗರೂಫಿಸ್, ಎಂಟು ಆರೋಪಿಗಳ ವಿರುದ್ಧದ ಆರೋಪಗಳನ್ನು ವಜಾಗೊಳಿಸಲು ವಿವರವಾದ ಕಾರಣಗಳನ್ನು ವಿವರಿಸುವಂತೆ ನ್ಯಾಯಾಂಗ ಇಲಾಖೆಗೆ ಸೂಚನೆ ನೀಡಿದ್ದಾರೆ.