ಇಂದು ಭಾರತಕ್ಕೆ ಆಗಮಿಸಲಿರುವ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ: ಜೈಶಂಕರ್ ಜೊತೆ ಚರ್ಚೆ | Marco Rubio

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು ಇಂದಿನಿಂದ(ಅ. 20) ಮೂರು ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದು, ಮುಂಬೈ ಮತ್ತು ಜಾಮ್‌ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. ಈ ವರ್ಷದಲ್ಲಿ ಇದು ಅವರ ಎರಡನೇ ಭೇಟಿಯಾಗಿರಲಿದೆ.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ
Published on: 

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು ಇಂದಿನಿಂದ(ಅ. 20) ಮೂರು ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದು, ಮುಂಬೈ ಮತ್ತು ಜಾಮ್‌ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. ಈ ವರ್ಷದಲ್ಲಿ ಇದು ಅವರ ಎರಡನೇ ಭೇಟಿಯಾಗಿರಲಿದೆ.

ವಿದೇಶಾಂಗ ಸಚಿವಾಲಯದ ಪ್ರಕಾರ, ರುಬಿಯೊ ಮಂಗಳವಾರ ಮಧ್ಯಾಹ್ನ 2.15ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ತಾಜ್ ಮಹಲ್ ಪ್ಯಾಲೇಸ್ ಹೋಟೆಲ್‌ನಲ್ಲಿ ಜೈಶಂಕರ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಮೊದಲು 26/11 ಭಯೋತ್ಪಾದಕ ದಾಳಿಯ ಬಲಿಪಶುಗಳನ್ನು ಗೌರವಿಸಲು ತಾಜ್ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪಗುಚ್ಛ ಸಲ್ಲಿಸಲಿದ್ದಾರೆ ಎಂದು ತಿಳಿಸಿದೆ.

Also Read
'ಭಾರತವನ್ನು ಧ್ವಂಸಗೊಳಿಸಲು ದುಷ್ಟ ಶಕ್ತಿಗಳಿಂದ ಯತ್ನ, ಆಡಳಿತ ಬದಲಾವಣೆ ಅಸಾಧ್ಯ': RSS ಮುಖ್ಯಸ್ಥ Mohan Bhagwat
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗಿನ ಸಭೆಯಲ್ಲಿ ಪ್ರಸ್ತಾವಿತ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ, ಇಂಧನ ಭದ್ರತೆ ಮತ್ತು ಕಾರ್ಯತಂತ್ರದ ಸಹಕಾರದ ಕುರಿತು ಮಾತುಕತೆಗಳು ನಡೆಯುವ ನಿರೀಕ್ಷೆಯಿದೆ. ಬಳಿಕ ಮುಂಬೈ ಮತ್ತು ಗುಜರಾತ್‌ನ ಜಾಮ್‌ನಗರದಲ್ಲಿ ನಡೆಯುವ ಇತರ ಕಾರ್ಯಕ್ರಮಗಳಲ್ಲಿ ರೂಬಿಯೊ ಭಾಗವಹಿಸಲಿದ್ದಾರೆ.

ನಾಳೆ ಗುಜರಾತ್​ನ ಜಾಮ್‌ನಗರಕ್ಕೆ ರುಬಿಯೊ ಅವರ ಭೇಟಿ ನೀಡಲಿದ್ದಾರೆ. ಅಲ್ಲಿ ಮುಖೇಶ್ ಅಂಬಾನಿಯ ಅವರ ದಿನಕ್ಕೆ 1.4 ದಶಲಕ್ಷ ಬ್ಯಾರೆಲ್ ಕಚ್ಚಾ ತೈಲವನ್ನು ಸಂಸ್ಕರಿಸುವ ಸಾಮರ್ಥ್ಯವಿರುವ, ವಿಶ್ವದ ಅತಿದೊಡ್ಡ ಏಕ-ಸ್ಥಳೀಯ ಸೌಲಭ್ಯವಾದ ರಿಲಯನ್ಸ್‌ನ ಸಂಸ್ಕರಣಾಗರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಬಳಿಕ ಮುಂಬೈಗೆ ವಾಪಸ್ ಆಗಲಿದ್ದಾರೆ (ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net