ನವದೆಹಲಿ: ಜನರ ಗೌಪ್ಯತೆಯನ್ನು ಆನ್‌ಲೈನ್‌ನಲ್ಲಿ ಉಲ್ಲಂಘಿಸಲು X (ಟ್ಟಿಟರ್) ನ AI ಚಾಟ್‌ಬಾಟ್ ಗ್ರೋಕ್ನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬ ಕಳವಳ ಹೆಚ್ಚುತ್ತಿರುವ ನಡುವೆ, ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ (Priyanka Chaturvedi) ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ತುರ್ತು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.