ರಾಜಸ್ಥಾನದ ಚಿತ್ತೋರಗಢದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಷಾ, ಸ್ವಾತಂತ್ರ್ಯ ದಿನಾಚರಣೆಯಂದು ಸೋನಿಯಾ ಮತ್ತು ಕಾಂಗ್ರೆಸ್ ರಾಷ್ಟ್ರಗೀತೆಯನ್ನು ಅಪಮಾನಗೊಳಿಸಿದ್ದು, ಅವರು ಇಡೀ ದೇಶದ ಕ್ಷಮೆ ಕೇಳಬೇಕು ಎಂದು ಆಗ್ರಹಿಸುತ್ತಾ, ವೋಟ್ ಬ್ಯಾಂಕ್ ರಾಜಕಾರಣದ ಆಸೆಯಿಂದ ಕಾಂಗ್ರೆಸ್ ವಂದೇ ಮಾತರಂ ಅನ್ನು ಮರೆತಿದೆ ಎಂದು ಕಿಡಿಕಾರಿದ್ದರು.