ದೇವರು ನಾಡು ಕೇರಳಂ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ.ಸತೀಶನ್ | V D Satheesan

ವಿಡಿ ಸತೀಶನ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿರುವುದು.
ವಿಡಿ ಸತೀಶನ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿರುವುದು.
Published on
ತಿರುವನಂತಪುರಂ: ದೇವರನಾಡು ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್(V D Satheesan) ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ಇಂದು(ಮೇ 18) ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು.
ಹತ್ತು ವರ್ಷಗಳ ನಂತರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತೆ ಅಧಿಕಾರಕ್ಕೆ ಬಂದಿದ್ದು, ವಿಡಿ ಸತೀಶನ್ ಸಿಎಂ ಪ್ರಮಾಣವಚನ ಸ್ವೀಕರಿಸಿದ್ರೆ, ಅವರ ಜೊತೆ 20 ಶಾಸಕರು ಸಹ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು. ಜೊತೆಗೆ ನಿರ್ಗಮಿತ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಬಿಜೆಪಿಯ ರಾಜೀವ್ ಚಂದ್ರಶೇಖರ್ ಕೂಡ ಸಮಾರಂಭದಲ್ಲಿ ಭಾಗವಹಿಸಿದ್ದರು.
ಸತೀಶನ್ ಜೊತೆಗೆ 20 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕಾಂಗ್ರೆಸ್​ನಿಂದ ಸಿಎಂ ಹುದ್ದೆಯ ಆಕಾಂಕ್ಷಿಯಾಗಿದ್ದ ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ ಮುರಳೀಧರನ್, ಎ ಪಿ ಅನಿಲ್ ಕುಮಾರ್, ಪಿ ಸಿ ವಿಷ್ಣುನಾಥ್, ರೋಜಿ ಎಂ ಜಾನ್, ಬಿಂದು ಕೃಷ್ಣ, ಎಂ ಲಿಜು, ಟಿ ಸಿದ್ದಿಕ್, ಕೆ ಎ ತುಳಸಿ ಮತ್ತು ಒ ಜೆ ಜನೀಶ್ ಪ್ರಮಾಣವಚನ ಸ್ವೀಕರಿಸಿದರು.
ಮಿತ್ರ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್​ನಿಂದ ಪಿಕೆ ಕುನ್ಹಾಲಿಕುಟ್ಟಿ, ಕೆಎಂ ಶಾಜಿ, ವಿ ಅಬ್ದುಲ್ ಗಫೂರ್, ಎನ್ ಶಂಸುದ್ದೀನ್ ಮತ್ತು ಪಿಕೆ ಬಶೀರ್, ಮಾನ್ಸ್ ಜೋಸೆಫ್ (ಕೇರಳ ಕಾಂಗ್ರೆಸ್-ಜೋಸೆಫ್), ಶಿಬು ಬೇಬಿ ಜಾನ್ (ಕ್ರಾಂತಿಕಾರಿ ಸಮಾಜವಾದಿ ಪಕ್ಷ), ಅನೂಪ್ ಜಾಕೋಬ್ (ಕೇರಳ ಕಾಂಗ್ರೆಸ್-ಜಾಕೋಬ್), ಮತ್ತು ಸಿಪಿ ಜಾನ್ (ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷ) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net