ಸಿಜೆಪಿ ಹೋರಾಟಕ್ಕೆ ಗೆಲುವು; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ | Dharmendra Pradhan

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಕಾಕ್ರೋಚ್ ಜನತಾ ಪಾರ್ಟಿಯ ಜೊತೆ ಕೇಂದ್ರ ಸರ್ಕಾರ ಮೂರನೇ ಸುತ್ತಿನ ಮಾತುಕತೆ ನಡೆಸುವ ಮುನ್ನ ಪ್ರಧಾನಿ ಮೋದಿಯವರಿಗೆ ಪ್ರಧಾನ್ ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಮತ್ತು ಅದನ್ನು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.
ತಮ್ಮ ರಾಜೀನಾಮೆಯ ಕುರಿತು ಪ್ರತಿಕ್ರಿಯಿಸಿರುವ ಅವರು, ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವ ಮತ್ತು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಬೃಹತ್ ಯುವ ಪ್ರತಿಭಟನೆಯನ್ನು ದೇಶವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯುವ ಅಗತ್ಯದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಬೆಳಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದ ಸಿಜೆಪಿ ವಕ್ತಾರ ಅಶುತೋಷ್ ರಾಂಕಾ, ಕೇಂದ್ರ ಸರ್ಕಾರದೊಂದಿಗಿನ ಮೂರನೇ ಸುತ್ತಿನ ಮಾತುಕತೆಗೂ ಮುನ್ನ ತನ್ನ ನಿಲುವನ್ನು ಮತ್ತಷ್ಟು ಗಟ್ಟಿಯಾಗಿದ್ದು, ಪ್ರಧಾನ್ ರಾಜೀನಾಮೆ ನೀಡದಿದ್ದರೇ ಯಾವುದೇ ಮಾತುಕತೆಗೆ ಅರ್ಥವಿಲ್ಲ. ಅವರ ರಾಜೀನಾಮೆ ವಿಷಯ ರಾಜಿ ಮಾಡಿಕೊಳ್ಳಲಾಗದ್ದು, ಸರ್ಕಾರದಿಂದ ಅವರ ರಾಜೀನಾಮೆ ಪಡೆಯಲ್ಲ ಎಂಬ ಉತ್ತರ ಬಂದ್ರೆ, ಹೆಚ್ಚಿನ ಚರ್ಚೆಗೆ ಯಾವುದೇ ಅರ್ಥವಿಲ್ಲ ಎಂದು ಹೇಳಿದ್ದರು.
ಇನ್ನೂ ಪ್ರಧಾನ್ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ನಾವು ಗೆಲುವು ಸಾಧಿಸಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net