ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವು ನಮ್ಮದೇ; ಮೇ 4ರಂದು ಸಿಹಿ ವಿತರಣೆ : ಪ್ರಧಾನಿ ಮೋದಿ | PM Modi

ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Published on
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮತ್ತೊಂದೆಡೆ ಎರಡನೇ ಹಂತದ ಕ್ಷೇತ್ರಗಳಲ್ಲಿ ಪ್ರಚಾರ ಮುಂದುವರೆಸಿರುವ ಪ್ರಧಾನಿ ಮೋದಿ, ಈ ಬಾರಿಯ ಚುನಾವಣೆಯಲ್ಲಿ ಗೆಲುವು ನಮ್ಮದೇ, ಮೇ 04ರಂದು ಸ್ವೀಟ್ ವಿತರಣೆ ಮಾಡುತ್ತೇವೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ.
ನಾಡಿಯಾ ಜಿಲ್ಲೆಯಲ್ಲಿ ನಡೆದ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಮತದಾನ ನಡೆದ ಪ್ರದೇಶಗಳಲ್ಲಿ ಈ ಬಾರಿಯೂ ಹೆಚ್ಚಿನ ಮತದಾನವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಮೇ 4 ರಂದು ಬಿಜೆಪಿ ಇತಿಹಾಸ ಸೃಷ್ಟಿಸಲಿದೆ. ಮತದಾರರು ಮಮತಾ ಬ್ಯಾನರ್ಜಿಯವರನ್ನು ಮನೆಗೆ ಕಳುಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಟಿಎಂಸಿ ಮತ್ತು ಕಾಂಗ್ರೆಸ್ ಒಟ್ಟಾಗಿ ಮಹಿಳಾ ಮೀಸಲಾತಿ ಮಸೂದೆಯನ್ನು ತಡೆದಿವೆ ಎಂದು ಆರೋಪಿಸಿದ ಅವರು, ಅದಕ್ಕಾಗಿ ಟಿಎಂಸಿಯನ್ನು ಈ ಚುನಾವಣೆಯಲ್ಲಿ ಶಿಕ್ಷಿಸಬೇಕು. ಈ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ ಜಂಗಲ್ ರಾಜ್ ಆಡಳಿತ ಕೊನೆಯಾಗುತ್ತದೆ. ಟಿಎಂಸಿ ಸರ್ಕಾರದಲ್ಲಿ ಹಲವು ಕಾರ್ಖಾನೆಗಳು ಮುಚ್ಚಿ ಹೋಗಿವೆ. ಹಲವು ದೃಷ್ಕೃತ್ಯಗಳು ನಡೆದಿದ್ದು, ನಾವು ಅಧಿಕಾರಕ್ಕೆ ಬಂದ ತಕ್ಷಣ ಅವುಗಳ ಬಗ್ಗೆ ಕ್ರಮಕೈಗೊಳ್ತೇವೆ ಎಂದಿದ್ದಾರೆ.
ಚುನಾವಣೆಯ ಮೊದಲ ಹಂತದ 152 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಉಳಿದ ಕ್ಷೇತ್ರಗಳಿಗೆ ಏಪ್ರಿಲ್ 29 ರಂದು ಮತದಾನ ನಡೆಯಲಿದೆ. ಮೇ 04ರಂದು ಪಂಚರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net