

ಮುಂಬೈ: ಖ್ಯಾತ ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಭಾನುವಾರ(ಅ. 18) ಮುಂಬೈನ ಜುಹುವಿನಲ್ಲಿ ಗುಂಡಿನ ದಾಳಿ ನಡೆದಿದ್ದು, ಅದೃಷ್ಟವಶಾತ್ ನಟ ಸಣ್ಣ-ಪುಟ್ಟ ಗಾಯಗಳಿಂದ ಪವಾಡ ಸದೃಶ್ಯದಂತೆ ಪಾರಾಗಿದ್ದಾರೆ. ಮೂವರು ದುಷ್ಕರ್ಮಿಗಳ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪುಷ್ಪಾ ಪಾರ್ಕ್ ಬಳಿ ಸಂಜೆ 7 ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆದಿದೆ. ಫುಟ್ಬಾಲ್ ಮೈದಾನದಲ್ಲಿ ಆಟವಾಡಿ ಮನೆಗೆ ತೆರಳುವಾಗ ಗೇಟ್ ಬಳಿ ದುಷ್ಕರ್ಮಿಗಳು ಟೈಗರ್ ಶ್ರಾಫ್ ಅವರ ಬಿಎಮ್ಡಬ್ಲ್ಯೂ ಕಾರಿನ ಮೇಲೆ ಮೂರು ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಸೇರಿದ ಇಬ್ಬರು ದರೋಡೆಕೋರರು ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ.
ವಿಡಿಯೋದಲ್ಲಿ, ಒಟ್ಟು ಮೂವರು ದುಷ್ಕರ್ಮಿಗಳು ಬೈಕ್ನಲ್ಲಿ ಬಂದಿದ್ದು, ಇಬ್ಬರು ಕಾರಿನ ಮೇಲೆ ಗುಂಡು ಹಾರಿಸುವುದನ್ನು ತೋರಿಸುತ್ತದೆ. ಬಳಿಕ ಆರೋಪಿಗಳು ಅಲ್ಲಿಂದ ಓಡಿ ಹೋಗುತ್ತಾರೆ. ಗುಂಡಿನ ದಾಳಿಯಲ್ಲಿ ಟೈಗರ್ ಶ್ರಾಫ್ಗೆ ಯಾವುದೇ ಗಾಯಗಳಾಗಿಲ್ಲ ಅವರು ಸುರಕ್ಷಿತವಾಗಿದ್ದು, ಅವರ ಕಾರಿನ ಚಾಲಕ ಮತ್ತು ಮತ್ತೊಬ್ಬರಿಗೆ ಗಾಯಗಳಾಗಿದ್ದು, ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟೈಗರ್ ಶ್ರಾಫ್ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮುಂಬೈನ ಸಾಂತಾಕ್ರೂಜ್ನಲ್ಲಿ ವಿಚಾರಣೆಗಾಗಿ ಪೊಲೀಸರು ಒರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮತ್ತು ಗುಂಡಿನ ದಾಳಿಯ ತನಿಖೆ ಮತ್ತು ದಾಳಿಕೋರರನ್ನು ಪತ್ತೆಹಚ್ಚಲು ಒಟ್ಟು 15 ತಂಡಗಳನ್ನು ರಚಿಸಿದ್ದಾರೆ.
ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮುಂಬೈ ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ಗುಂಡಿನ ದಾಳಿಯ ವಿವರಗಳನ್ನು ಪಡೆದಿದ್ದಾರೆ. ತನಿಖೆಯನ್ನು ತ್ವರಿತಗೊಳಿಸಲು ಮತ್ತು ಹೊಣೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅವರು ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.
ಶ್ರಾಫ್ ಮೇಲಿನ ಗುಂಡಿನ ದಾಳಿಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ. ಗ್ಯಾಂಗ್ಸ್ಟಾರ್ ಅನಿಲ್ ಪಂಡಿತ್ ಫೇಸ್ಬುಕ್ ಪೋಸ್ಟ್ ಹಾಕಿದ್ದು, ಹರ್ಮನ್ ಸಂಧು ಮತ್ತು ನಾನು ಈ ದಾಳಿ ನಡೆಸಿದ್ದೇವೆ ಎಂದು ಹೇಳಿದ್ದಾರೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರೊಂದಿಗೆ ಕೆಲಸ ಮಾಡದಂತೆ ಈ ಹಿಂದೆ ಎಚ್ಚರಿಕೆ ನೀಡಲಾಗಿತ್ತು. ಅದನ್ನು ನಿರ್ಲಕ್ಷ್ಯ ಮಾಡಿದ್ದರಿಂದ ಈ ದಾಳಿ ನಡೆಸಲಾಗಿದೆ ಎಂದಿದ್ದಾರೆ (ಏಜೆನ್ಸೀಸ್).