Vijay Oath Taking: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಮೈತ್ರಿ ಯುಗಾರಂಭವಾಗಿದ್ದು, ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ ರಚಿಸಲು ಕಾಂಗ್ರೆಸ್ ಅಧಿಕೃತವಾಗಿ ತನ್ನ ಬೆಂಬಲವನ್ನು ಘೋಷಿಸಿದೆ. ಮಂಗಳವಾರದಂದು ಚೆನ್ನೈನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ತಮಿಳುನಾಡು ಕಾಂಗ್ರೆಸ್ ಸಮಿತಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕರು ವಿಜಯ್ ಅವರನ್ನು ಭೇಟಿ ಮಾಡಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ.