234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಈ ವರ್ಷದ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಚುನಾವಣೆಗಳು ನಡೆಯಲಿದ್ದು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಯ ಕೇಂದ್ರಾಡಳಿತ ಪ್ರದೇಶ (ಯುಟಿ) ಚುನಾವಣೆಗಳು ನಡೆಯಲಿವೆ. ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ಟಿವಿಕೆ ಎಂಟ್ರಿ ಲೆಕ್ಕಾಚಾರವನ್ನೇ ಬದಲಾಯಿಸಿದ್ದು, ಮುಂಬರುವ ಚುನಾವಣೆಗಾಗಿ ಶಕ್ತಿ ಮೀರಿ ತಯಾರಿ ನಡೆಸುತ್ತಿದೆ. ಮತದಾನಕ್ಕೆ ಸಂಬಂಧಿಸಿದ ಕಾರ್ಯಗಳಿಗಾಗಿ 10 ಸದಸ್ಯರ ಚುನಾವಣಾ ಪ್ರಚಾರ ಸಮಿತಿಯನ್ನು ಸಹ ರಚಿಸಿದೆ.