ನೀಟ್ ಪತ್ರಿಕೆ ಸೋರಿಕೆ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ, ದೆಹಲಿಯಲ್ಲಾದ ವಿದ್ಯಾರ್ಥಿಗಳ ಮೇಲಿನ ದಬ್ಬಾಳಿಕೆಯನ್ನು ವಿರೋಧಿಸಿ ವಿರೋಧ ಪಕ್ಷಗಳು ಮತ್ತು ಸಾಮಾಜಿಕ ಸಂಘಟನೆಗಳು ಶನಿವಾರ ಬಿಹಾರ ಬಂದ್‌ಗೆ ಕರೆ ನೀಡಿದ್ದವು. ಪಾಟ್ನಾದಲ್ಲಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿಭಟನೆ ನಡೆಸಿದ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆ ಹಿಂಸಾಚಾರ ನಡೆದಿತ್ತು.