ವಕ್ಫ್ ಕಾಯ್ದೆ ವಿರುದ್ದ ಪ್ರತಿಭಟನೆಯಲ್ಲಿ ಹಿಂಸಾಚಾರ; ತಂದೆ-ಮಗನನ್ನು ಕೊಂದ 13 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ | Life imprisonment
ಸಾಂದರ್ಭಿಕ ಚಿತ್ರ
Published on:
Copied
Follow Us
ಕೋಲ್ಕತ್ತಾ: ಕೇಂದ್ರ ಸರ್ಕಾರ ಈ ವರ್ಷ ಏಪ್ರಿಲ್ ತಿಂಗಳಲ್ಲಿ ತಂದ ನೂತನ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ನಡೆದ ಹಿಂಸಾಚಾರದಲ್ಲಿ ತಂದೆ-ಮಗನನ್ನು ಕೊಂದ 13 ಅಪರಾಧಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ(Life imprisonment) ವಿಧಿಸಿದೆ.
ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರದ ತ್ವರಿತ ನ್ಯಾಯಾಲಯವು ಮಂಗಳವಾರ(ಡಿ. 23) 13 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಜೊತೆಗೆ ಸಂತ್ರಸ್ತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ಏ.12ರಂದು ಸಂಸೇರ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಜಾಫ್ರಾಬಾದ್‌ನಲ್ಲಿ ಹರಗೋಬಿಂದ ದಾಸ್(72) ಮತ್ತು ಅವರ ಮಗ ಚಂದನ್ ದಾಸ್(42) ಅವರನ್ನು ಗುಂಪೊಂದು ಅವರ ಮನೆಯಲ್ಲಿ ಹತ್ಯೆ ಮಾಡಿತ್ತು. ನಿನ್ನೆ ನ್ಯಾಯಾಲಯ 13 ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ (ಏಜೆನ್ಸೀಸ್).