ನವದೆಹಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮುಂಬರುವ ಏಕದಿನ ಕ್ರಿಕೆಟ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ರನ್ ಮಷಿನ್, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಗಾಯದ(Virat Kohli Injury) ಸಮಸ್ಯೆಯಿಂದಾಗಿ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಸಂಪೂರ್ಣವಾಗಿ ಹೊರಬಿದ್ದಿದ್ದಾರೆ. ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಈ ಮಹತ್ವದ ಬೆಳವಣಿಗೆಯನ್ನು ಖಚಿತಪಡಿಸಿದ್ದು, ಏಕದಿನ ಸರಣಿಯಲ್ಲಿ ವಿರಾಟ್ ಬದಲಿಗೆ ಯುವ ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಪ್ರಕಟಿಸಿದ್ದಾರೆ.