ಪ್ರಾಥಮಿಕ ತನಿಖೆಯ ಪ್ರಕಾರ, ಬುಧವಾರ ರಾತ್ರಿ 10:15ರ ಸುಮಾರಿಗೆ ಚಂದ್ರನಾಥ್ ರಥ್ ಅವರು ತಮ್ಮ ಮನೆಗೆ ಕೇವಲ 100 ಮೀಟರ್ ದೂರದಲ್ಲಿದ್ದಾಗ, ನಾಲ್ಕು ಮೋಟಾರ್ ಸೈಕಲ್‌ಗಳಲ್ಲಿ ಬಂದ ಹಂತಕರು ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ಡೋಲ್ಟಾಲಾ ಎಂಬಲ್ಲಿ ನಡೆದ ಈ ದಾಳಿಯಲ್ಲಿ ಹಂತಕರು ಪಕ್ಕಾ ಯೋಜನೆಯೊಂದಿಗೆ ಪಾಯಿಂಟ್ ಬ್ಲಾಂಕ್ ರೇಂಜ್‌ನಲ್ಲಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.