ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನಮಾನ ಬದಲಾಗುತ್ತಿರುವ ಬಗ್ಗೆ ಮಾತನಾಡಿದ ಮೋದಿ, ಹಿಂದೆ ಅನೇಕ ದೇಶಗಳಿಂದ ದೂರವಿದ್ದ ಭಾರತ ಇಂದು ವಿಶ್ವದ ಎಲ್ಲಾ ರಾಷ್ಟ್ರಗಳೊಂದಿಗೆ ಸದೃಢ ಸಂಬಂಧವನ್ನು ಹೊಂದುತ್ತಿದೆ ಎಂದು ತಿಳಿಸಿದರು. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ನಾಯಕತ್ವವನ್ನು ಶ್ಲಾಘಿಸಿದ ಅವರು, ಮುಂಬರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ಚುನಾವಣೆಗಳಲ್ಲಿ ಪಕ್ಷವು ಹೊಸ ಶಕ್ತಿಯೊಂದಿಗೆ ಮುನ್ನಡೆಯುತ್ತಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.