ದೆಹಲಿ, ಮುಂಬೈ ಮೇಲೆ ಬಾಂಬ್ ಹಾಕುತ್ತೇವೆ..ಪಶ್ಚಿಮ ಏಷ್ಯಾದ ಸಂಘರ್ಷದ ನಡುವೆ ಉದ್ಧಟತನದ ಹೇಳಿಕೆ ನೀಡಿದ ಪಾಕ್​ ಮಾಜಿ ಹೈಕಮಿಷನರ್ | Abdul Basit

Abdul Basit | ಪಾಕಿಸ್ತಾನದ ಮಾಜಿ ಹೈಕಮಿಷನರ್ ಅಬ್ದುಲ್ ಬಾಸಿತ್
Abdul Basit | ಪಾಕಿಸ್ತಾನದ ಮಾಜಿ ಹೈಕಮಿಷನರ್ ಅಬ್ದುಲ್ ಬಾಸಿತ್
Published on
ನವದೆಹಲಿ/ಇಸ್ಲಾಮಾಬಾದ್: ಪಶ್ಚಿಮ ಏಷ್ಯಾದ ಸಂಘರ್ಷ ಭೀಕರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೇ, ಭಾರತದ ಭದ್ರತೆಗೆ ಧಕ್ಕೆ ತರುವಂತಹ ಉದ್ಧಟತನದ ಹೇಳಿಕೆಯೊಂದನ್ನು ಪಾಕಿಸ್ತಾನದ ಮಾಜಿ ಹೈಕಮಿಷನರ್ ಅಬ್ದುಲ್ ಬಾಸಿತ್ (Abdul Basit) ನೀಡಿದ್ದಾರೆ.
ಟಿವಿ ಸಂದರ್ಶನವೊಂದರಲ್ಲಿ ಮಾತನಾಡಿರುವ ಬಾಸಿತ್, ಒಂದು ವೇಳೆ ಅಮೆರಿಕ ಅಥವಾ ಇಸ್ರೇಲ್ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ, ನಾವು ಪ್ರತೀಕಾರವಾಗಿ ಭಾರತದ ಮೇಲೆ ಪ್ರತಿ ದಾಳಿ ಮಾಡುತ್ತೇವೆ ಎಂದು ಹೇಳುವ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.
ಕಳೆದ ಮೂರು ವಾರಗಳಿಂದ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ತೀವ್ರಗೊಂಡಿದ್ದು, ಇಸ್ರೇಲ್ ತನ್ನ ರಕ್ಷಣಾ ಬಜೆಟ್​ನ್ನು ತುರ್ತಾಗಿ ಹೆಚ್ಚಿಸಿಕೊಂಡಿದ್ದು, ಟೆಹ್ರಾನ್ ಮತ್ತು ಬೈರುತ್ ಮೇಲೆ ಸರಣಿ ದಾಳಿಗಳನ್ನು ನಡೆಸುತ್ತಿದೆ. ಅತ್ತ ಅಮೆರಿಕ ಕೂಡ ಇರಾನ್‌ನ ಪರಮಾಣು ಸ್ಥಾವರಗಳ ಮೇಲೆ ಕಣ್ಣಿಟ್ಟಿದ್ದು, ಯಾವುದೇ ಕ್ಷಣದಲ್ಲಿ ಪರಿಸ್ಥಿತಿ ಕೈಮೀರಬಹುದು ಎಂಬ ಆತಂಕ ಮನೆಮಾಡಿದೆ. ಇಂತಹ ಪರಿಸ್ಥಿತಿಯಲ್ಲಿ ಪಾಕಿಸ್ತಾನದ ಮಾಜಿ ಹೈಕಮಿಷನರ್​ ಹೇಳಿಕೆ ಭಾರಿ ಸಂಚಲನ ಮೂಡಿಸಿದೆ.

ಬಾಸಿತ್ ವಾದವೇನು?

2014 ರಿಂದ 2017 ರವರೆಗೆ ನವದೆಹಲಿಯಲ್ಲಿ ಪಾಕಿಸ್ತಾನದ ಉನ್ನತ ಅಧಿಕಾರಿಯಾಗಿದ್ದ ಅಬ್ದುಲ್ ಬಾಸಿತ್, ಇತ್ತೀಚಿನ ಸಂದರ್ಶನವೊಂದರಲ್ಲಿ ವರ್ಸ್ಟ್ ಕೇಸ್ ಸಿನಾರಿಯೋ ಬಗ್ಗೆ ವಿವರಿಸಿದ್ದಾರೆ. ಇರಾನ್‌ನಲ್ಲಿ ಪರಿಸ್ಥಿತಿ ಹದಗೆಡುತ್ತಿದೆ ಮತ್ತು ಇಸ್ರೇಲ್ ನಮ್ಮ ಹೊಸ್ತಿಲಿಗೆ ಬಂದಿದೆ ಎಂದು ಭಾವಿಸೋಣ. ಅಮೆರಿಕವು ಪಾಕಿಸ್ತಾನದ ಮೇಲೆ ದಾಳಿ ಮಾಡಿದಾಗ, ನಮಗೆ ಕೊಲ್ಲಿ ರಾಷ್ಟ್ರಗಳಲ್ಲಿರುವ ಅವರ ನೆಲೆಗಳನ್ನು ತಲುಪಲು ಅಥವಾ ಇಸ್ರೇಲ್ ಮೇಲೆ ನೇರ ದಾಳಿ ಮಾಡಲು ಸಾಧ್ಯವಾಗದಿದ್ದರೆ, ನಮಗಿರುವ ಏಕೈಕ ಆಯ್ಕೆ ಭಾರತ ಎಂದಿದ್ದಾರೆ.

ಸಂಘರ್ಷದ ಹಿನ್ನಲೆ

ಫೆಬ್ರವರಿ 28ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಸಂಘಟಿತ ದಾಳಿ ಇಡೀ ಗಲ್ಫ್ ಪ್ರಾಂತ್ಯವನ್ನು ಬೆಚ್ಚಿಬೀಳಿಸಿತ್ತು. ಇದಕ್ಕೆ ಪ್ರತಿಯಾಗಿ ಇರಾನ್ ಕೂಡ ಮಿಲಿಟರಿ ಸೌಲಭ್ಯಗಳ ಮೇಲೆ ದಾಳಿ ನಡೆಸಿದೆ(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net