ಕಾರ್ಯಕ್ರಮಕ್ಕೆ ಬಂದಿದ್ದ ಕರುಣಾ ಎಂಬ ಮಹಿಳೆ, ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತನ್ನ ಮಗಳ ವೈದ್ಯಕೀಯ ಚಿಕಿತ್ಸೆಗಾಗಿ ಹಣಕಾಸಿನ ನೆರವು ಕೋರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಮಗಳ ಪರಿಸ್ಥಿತಿಯನ್ನು ವಿವರಿಸಿ ಕಣ್ಣೀರಿಟ್ಟ ತಾಯಿಗೆ ಸಿಎಂ ಸುವೇಂದು ಅವರು ಧೈರ್ಯ ತುಂಬಿ, ಸರ್ಕಾರದ ವತಿಯಿಂದ ಅಗತ್ಯವಿರುವ ಎಲ್ಲಾ ವೈದ್ಯಕೀಯ ಮತ್ತು ಆರ್ಥಿಕ ನೆರವನ್ನು ತಕ್ಷಣವೇ ಒದಗಿಸುವ ಭರವಸೆ ನೀಡಿದರು.