

ಪ್ರಮುಖ ಮುಖ್ಯಾಂಶಗಳು
ಕಳೆದ ಕೆಲ ದಿನಗಳ ಹಿಂದೆ ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ದೆಹಲಿಯ ಜಂತರ್-ಮಂತರ್ನಲ್ಲಿ ಪ್ರತಿಭಟನೆ ನಡೆದಿತ್ತು.
ಈಗ ಈ ಪ್ರತಿಭಟನೆ ಹಾಗೂ ಅಭಿಜಿತ್ ದೀಪ್ಕೆ ಬಗ್ಗೆ ಕೇಂದ್ರ ಸಂಸದೀಯ ಸಚಿವ ಕಿರಣ್ ರಿಜುಜು (Kiren Rijiju on Abhijeet Dipke) ವ್ಯಕ್ತ ಪಡಿಸಿರುವ ಅಭಿಪ್ರಾಯ ಈಗ ಎಲ್ಲಡೆ ವೈರಲ್ ಆಗುತ್ತಿದೆ.
ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಪ್ರಶ್ನೆ ಮಾಡುವುದು, ಹೋರಾಟ ಮಾಡುವುದು ತಪ್ಪಲ್ಲ. ಆದರೆ ಈ ಅಭಿಜಿತ್ ದೀಪ್ಕೆ ವಿದ್ಯಾರ್ಥಿ ನಾಯಕ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.