2021ರ ಚುನಾವಣಾ ಸಾಧನೆಯನ್ನು ಗಮನಿಸಿದರೆ, ಎಐಎಡಿಎಂಕೆ 66 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ ಕೊಯಮತ್ತೂರು ದಕ್ಷಿಣ ಮತ್ತು ತಿರುನಲ್ವೇಲಿ ಸೇರಿದಂತೆ ನಾಲ್ಕು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿತ್ತು. ಈ ಬಾರಿಯ ಚುನಾವಣೆಯು ಏಪ್ರಿಲ್ 23 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 4 ರಂದು ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ಫಲಿತಾಂಶದೊಂದಿಗೆ ತಮಿಳುನಾಡಿನ ಭವಿಷ್ಯವೂ ನಿರ್ಧಾರವಾಗಲಿದೆ. ಆಡಳಿತಾರೂಢ ಡಿಎಂಕೆ ಮೈತ್ರಿಕೂಟವನ್ನು ಮಣಿಸಲು ಎಐಎಡಿಎಂಕೆ ಮತ್ತು ಬಿಜೆಪಿ ಹೊಸ ತಂತ್ರಗಳೊಂದಿಗೆ ಅಖಾಡಕ್ಕಿಳಿದಿವೆ(ಏಜೆನ್ಸೀಸ್).