ಇಂಡಿಯಾ ಟುಡೇ ಸಂದರ್ಶನದಲ್ಲಿ ಮಾತನಾಡಿರುವ ಪುಟಿನ್, ದೆಹಲಿ ಭೇಟಿಯ ಸಂದರ್ಭದಲ್ಲಿ ರಷ್ಯಾ ಮತ್ತು ಭಾರತ ಹಲವು ಒಪ್ಪಂದಗಳಿಗೆ ಸಹಿ ಹಾಕಲು ಸಿದ್ಧತೆ ನಡೆಸುತ್ತಿರುವಾಗ, ಕೆಲವು ಪ್ರಮುಖ ಘೋಷಣೆಗಳ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಪುಟಿನ್, ಭಾರತವು ಶೇ. 7.7 ರಷ್ಟು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಯನ್ನು ಹೊಂದಿರುವ ಅದ್ಭುತ ದೇಶ. ಇದು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ, ರಾಷ್ಟ್ರವೇ ಹೆಮ್ಮೆಪಡಬಹುದಾದ ಸಾಧನೆಯಾಗಿದೆ ಎಂದರು. ಘೋಷಣೆಗಳ ಬಗ್ಗೆ ಗುಟ್ಟು ಬಿಟ್ಟು ಕೊಡದ ಪುಟಿನ್, ಮುಂದುವರಿದ ತಂತ್ರಜ್ಞಾನ ಸೇರಿದಂತೆ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಂತೆ ಎರಡೂ ದೇಶಗಳು ಸಮಗ್ರ ಸಹಕಾರ ಯೋಜನೆಯನ್ನು ಹೊಂದಿವೆ ಎಂದು ತಿಳಿಸಿದರು(ಏಜೆನ್ಸೀಸ್).