ಗುರುವಾರ ಈ ಕುರಿತು ಕಠಿಣ ಅವಲೋಕನ ನಡೆಸಿದ ನ್ಯಾಯಮೂರ್ತಿ ಶರ್ಮಾ, ಅತ್ಯಂತ ನಿಂದನೀಯ ಮತ್ತು ಅವಹೇಳನಕಾರಿ ಅಂಶಗಳನ್ನು ಪ್ರತಿವಾದಿಗಳು ಹರಡುತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಕಾನೂನು ಹೋರಾಟವನ್ನು ನ್ಯಾಯಾಲಯದಲ್ಲಿ ನಡೆಸುವ ಬದಲು, ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕ ಪ್ರಚಾರವನ್ನಾಗಿ ಪರಿವರ್ತಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜಕೀಯ ಅಧಿಕಾರವನ್ನು ಹೊಂದಿರುವ ಕೆಲವರು ನ್ಯಾಯಾಂಗದ ಘನತೆಯನ್ನು ಕುಗ್ಗಿಸಲು ಈ ಸಂಘಟಿತ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.