ಪೊಲೀಸರು ನಡೆಸಿದ ಮರಣೋತ್ತರ ಪರೀಕ್ಷೆಯಲ್ಲಿ ಶಿವನಾಗರಾಜು ಉಸಿರುಗಟ್ಟುವಿಕೆಯಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಪೊಲೀಸರು ಲಕ್ಷ್ಮಿ ಮಾಧುರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಿದ್ದಿದೆ. ತನಿಖೆಯ ವೇಳೆ ಮತ್ತೊಂದು ಆಘಾತಕಾರಿ ವಿಷಯವೇನೆಂದರೆ, ಪತಿಯನ್ನು ಕೊಂದ ನಂತರ ಮಾಧುರಿ ಶವದ ಪಕ್ಕದಲ್ಲೇ ಕುಳಿತು ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸಿದ್ದಳು ಎಂಬುದು ಫೋರೆನ್ಸಿಕ್ ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ,(ಏಜೆನ್ಸೀಸ್).