ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಅನೇಕರು ಪ್ರತಿಕ್ರಿಯಿಸಿದ್ದಾರೆ. ಒಬ್ಬ ಬಳಕೆದಾರರು ಕಾನೂನು ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದರೆ ಮಾತ್ರ ಇಂತಹ ಅಭ್ಯಾಸಗಳು ನಿಲ್ಲುತ್ತವೆ ಇಲ್ಲದಿದ್ದರೆ, ಹಾಗೇ ಮುಂದುವರೆಯುತ್ತವೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರಿ ಪ್ಲಾಟ್‌ಫಾರ್ಮ್‌ಗಳಲ್ಲಿ ಏನು ಮಾರಾಟವಾಗುತ್ತಿದೆ ಎಂಬುದನ್ನು ಮೇಲ್ವಿಚಾರಣೆ ಮಾಡುವುದು ಮತ್ತು ಗುಣಮಟ್ಟದ ಮಾನದಂಡಗಳನ್ನು ಖಚಿತಪಡಿಸಿಕೊಳ್ಳುವುದು ರೈಲ್ವೆ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದಿದ್ದಾರೆ (ಏಜೆನ್ಸೀಸ್).