ಮತ್ತೊಂದು ದೂರಿನಲ್ಲಿ, ಹೊಸ ವ್ಯಕ್ತಿಗಳೊಂದಿಗೆ ಸಂಪರ್ಕ ಬೆಳೆಸಲು ಈಕೆ ಬೇರೆ ಬೇರೆ ಹೆಸರಿನಲ್ಲಿ ಮತ್ತು ಫೇಕ್ ಅಕೌಂಟ್ಗಳನ್ನು ಬಳಸುತ್ತಿದ್ದರು ಎನ್ನಲಾಗಿದೆ. ಈ ಪೈಕಿ ದೂರುದಾರರು, ‘ಸ್ವೀಟಿ ತಿವಾರಿ’ ಎಂಬ ಹೆಸರನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ್ದಾರೆ. ಈ ಪ್ರಕರಣದಲ್ಲಿ ಮಹಿಳೆಗೆ ಮತ್ತಿಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸಹಕರಿಸುತ್ತಿದ್ದರು ಎಂದು ಹೇಳಲಾಗಿದೆ, ಪ್ರಕರಣವನ್ನು ಕೈಗೆತ್ತಿಕೊಂಡಿರುವ ಪೊಲೀಸರು, ಯುವತಿಯನ್ನು ವಿಚಾರಣೆಗೆ ಒಳಪಡಿಸಿ, ತನಿಖೆಯನ್ನು ಚುರುಕುಗೊಳಿಸಿದ್ದಾರೆ,(ಏಜೆನ್ಸೀಸ್).