ಇಂದಿನ ಪಂದ್ಯದ ಅಸಲಿ ಆಕರ್ಷಣೆಯಾಗಿದ್ದು ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್. ಕ್ರೀಸ್ಗಿಳಿದ ಮೊದಲ ಎಸೆತದಿಂದಲೇ ಆಸೀಸ್ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಹರ್ಮನ್, ಕೇವಲ 25 ಎಸೆತಗಳಲ್ಲಿ ಭರ್ಜರಿ ಅರ್ಧಶತಕ (50) ಪೂರೈಸಿದರು. ತಮ್ಮ ಇನ್ನಿಂಗ್ಸ್‌ನಲ್ಲಿ ಸತತ ಮೂರು ಸಿಕ್ಸರ್ ಸಿಡಿಸಿ ಅಬ್ಬರಿಸಿದ ಅವರು, ಒಟ್ಟಾರೆ 27 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಗಗನಚುಂಬಿ ಸಿಕ್ಸರ್‌ಗಳ ನೆರವಿನಿಂದ 56 ರನ್ ಚಚ್ಚಿದರು. 207.41 ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ ಕೌರ್, ಎಲಿಸ್ ಪೆರ್ರಿಗೆ ವಿಕೆಟ್ ಒಪ್ಪಿಸುವ ಮುನ್ನ ಭಾರತ ತಂಡವು ಬೃಹತ್ ಮೊತ್ತ ತಲುಪುವಂತೆ ನೋಡಿಕೊಂಡರು.