ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 170 ರನ್ ಗಳಿಸಿತು. ಸ್ಮೃತಿ ಮಂಧಾನಾ 44 ಎಸೆತಗಳಲ್ಲಿ 9 ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ 68 ರನ್ ಗಳಿಸಿದರು. ನಾಯಕಿ ಹರ್ಮನ್‌ಪ್ರೀತ್ ಅವರೊಂದಿಗಿನ ಜೊತೆಯಾಟದಲ್ಲಿ ಭಾರತ 150ಕ್ಕೂ ಹೆಚ್ಚು ರನ್ ಹೊಡೆಯಲು ಸಾಧ್ಯವಾಯಿತು.